ಪ್ರಧಾನಿ ಮೋದಿ (Photo: PTI)

ಹೊಸದಿಲ್ಲಿ: ರಾಷ್ಟ್ರೀಯ ಲಸಿಕಾ ಅಭಿಯಾನದಡಿ ಒಂಬತ್ತು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಒಂದು ಕೋಟಿಗೂ ಅಧಿಕ HPV ಲಸಿಕೆಗಳನ್ನು ನೀಡುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅಭಿಯಾನದ ಕುರಿತು ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, “ಲಸಿಕೆಯ ಪ್ರತಿ ಡೋಸ್ ಕೂಡಾ ಬಾಲಕಿಯರನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸುವ ಮತ್ತು ಅವರಿಗೆ ಆರೋಗ್ಯಕರ ಭವಿಷ್ಯವನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ” ಎಂದು ಶ್ಲಾಘಿಸಿದ್ದಾರೆ.

14 ವರ್ಷದ ಬಾಲಕಿಯರಿಗೆ ಒಂಬತ್ತು ತಿಂಗಳಿಗೂ ಕಡಿಮೆ ಅವಧಿಯಲ್ಲಿ ಒಂದು ಕೋಟಿಗೂ ಅಧಿಕ HPV ಲಸಿಕೆಯ ಡೋಸ್ ಗಳನ್ನು ನೀಡಲಾಗಿದೆ. ಇದು ನಿಗದಿತ ವಾರ್ಷಿಕ ಗುರಿಯ ಶೇ. 87ರಷ್ಟು ಪ್ರಗತಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, “ರೋಗ ನಿರೋಧಕ ಆರೋಗ್ಯ ಸೇವೆಯ ಪಯಣದಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಪ್ರತಿ ಡೋಸ್ ಕೂಡಾ ಬಾಲಕಿಯರನ್ನು ಗರ್ಭಕಂಠದ ಕ್ಯಾನ್ಸರ್ ನಿಂದ ರಕ್ಷಿಸುವ ಮತ್ತು ಅವರಿಗೆ ಆರೋಗ್ಯಕರ ಭವಿಷ್ಯವನ್ನು ಖಾತರಿಪಡಿಸುವ ಹೆಜ್ಜೆಯಾಗಿದೆ” ಎಂದು ತಿಳಿಸಿದ್ದಾರೆ.

ದೇಶವ್ಯಾಪಿ ಹಮ್ಮಿಕೊಂಡಿರುವ ಈ HPV ಲಸಿಕಾ ಅಭಿಯಾನದಡಿ 14 ವರ್ಷದ ಬಾಲಕಿಯರಿಗೆ ನಿಗದಿತ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಪೋಷಕರ ಸಮ್ಮತಿಯೊಂದಿಗೆ ಉಚಿತ, ಸ್ವಯಂಪ್ರೇರಿತ ಮತ್ತು ಸಿಂಗಲ್ ಡೋಸ್ ಲಸಿಕೆಯನ್ನು ನೀಡಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸದಾನಂದ ಗಂಗನಬೀಡು , ವಾರ್ತಾಭಾರತಿ

contributor