"ಲೋಕಸಭೆಯಿಂದ ಮಹುವಾ ಮೊಯಿತ್ರಾರನ್ನು ವಜಾ ಮಾಡಿ"
Update: 2023-11-08 21:38 IST
ಮಹುವಾ ಮೊಯಿತ್ರಾ (PTI)
ಹೊಸದಿಲ್ಲಿ: ತೃಣಮೂಲ ಕಾಂಗ್ರೆಸ್‌ನ ಮಹುವಾ ಮೊಯಿತ್ರಾ ಅವರು ಸಂಸದರಾಗಿ ಮುಂದುವರಿಯಲು ಅವಕಾಶ ನೀಡಬಾರದು. ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಅವರ ವಿರುದ್ಧದ ಪ್ರಶ್ನೆಗಾಗಿ ಲಂಚ ಆರೋಪಗಳ ಬಗ್ಗೆ ವಿಚಾರಣೆ ನಡೆಸುತ್ತಿದ್ದ ಸಂಸದೀಯ ನೀತಿ ಸಮಿತಿ ಶಿಫಾರಸು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. 500 ಪುಟಗಳ ವರದಿಯಲ್ಲಿ ಸಮಿತಿಯು ಕೇಂದ್ರದಿಂದ ಸಂಪೂರ್ಣ ತನಿಖೆ ನಡೆಸಬೇಕೆಂದು ಶಿಫಾರಸು ಮಾಡಿದೆ ಎಂದು ತಿಳಿದು ಬಂದಿದೆ.