×
Ad

ನಾಗ್ಪುರ: ಐಸ್ ಫ್ಯಾಕ್ಟರಿಯಲ್ಲಿ ಸ್ಫೋಟ; ಕಾರ್ಮಿಕ ಮೃತ್ಯು

Update: 2024-01-07 07:29 IST

Photo: ANI

ನಾಗ್ಪುರ:  ಉಪ್ಪಲವಾಡಿ ಪ್ರದೇಶದ ಬಾಲಾಜಿ ಐಸ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆಯಿಂದಾಗಿ ಶನಿವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ 70 ವರ್ಷದ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ಮೂರು ಮಂದಿ ಗಾಯಗೊಂಡಿದ್ದಾರೆ.

ಮೃತ ಕಾರ್ಮಿಕನನ್ನು ರಾಜಸ್ಥಾನ ಮೂಲದ ಡುಂಗಾರ್ ಸಿಂಗ್ ರಾವತ್ (70) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಸವಾನ್ ಬಘೇಲ್ (55), ಖೇಮು ಸಿಂಗ್ ಹಾಗೂ ನಯನ್ ಆರ್ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಸ್ತಾನು ಟ್ಯಾಂಕ್ ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿ, ಸ್ಫೋಟ ಸಂಭವಿಸಿರಬೇಕು ಎಂದು ಕಪಿಲ್ ನಗರ ಠಾಣೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದು ದೊಡ್ಡ ಪ್ರಮಾಣದ ಹಾನಿಯನ್ನುಂಟು ಮಾಡಿದ್ದು, ಅಕ್ಕಪಕ್ಕದಲ್ಲಿ ನಿಲ್ಲಿಸಿದ ವಾಹನಗಳೂ ಛಿದ್ರವಾಗಿವೆ ಎಂದು ತಿಳಿಸಿದ್ದಾರೆ.

ಘಟನೆ ಸಂಭವಿಸಿದಾಗ ಕಾರ್ಮಿಕರು ಫ್ಯಾಕ್ಟರಿ ಸ್ವಚ್ಛಗೊಳಿಸುತ್ತಿದ್ದರು. ಸ್ಫೋಟ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಗಂಭೀರ ಗಾಯಗೊಂಡಿದ್ದ ಡುಂಗಾರ್ ಸಿಂಗ್ ರಾವತ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಪೊಲೀಸರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News