×
Ad

ಜಮ್ಮು ಮತ್ತು ಕಾಶ್ಮೀರದಲ್ಲಿ ಗುಂಡಿನ ದಾಳಿ; ಒಬ್ಬ ಭಯೋತ್ಪಾದಕನ ಹತ್ಯೆ

Update: 2023-09-04 18:15 IST

Photo : twitter \ @AdityaRajKaul

ರೇಯಸಿ : ಜಮ್ಮು ಮತ್ತು ಕಾಶ್ಮೀರದ ರೇಯಸಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ದಾಳಿ ನಡೆದಿದ್ದು, ಒಬ್ಬ ಭಯೋತ್ಪಾದಕನನ್ನು ಎನ್ಕೌಂಟರ್ ಮಾಡಲಾಗಿದೆ. ಒಬ್ಬ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ.

ಜಿಲ್ಲೆಯ ತುಲಿ ಪ್ರದೇಶದ ಗಲಿ ಸೊಹಾಬ್ ಪ್ರದೇಶದಲ್ಲಿ ಘಟನೆ ವರದಿಯಾಗಿದೆ. ಮೂಲಗಳ ಪ್ರಕಾರ ಈ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರ ಇರುವಿಕೆಯನ್ನು ಗುಪ್ತಚರ ಇಲಾಖೆ ದೃಢಪಡಿಸಿತ್ತು. ಬಳಿಕ ಸೇನೆ ಮತ್ತು ಪೊಲೀಸ್ ಅಧಿಕಾರಿಗಳು ಭಯೋತ್ಪಾದಕರ ಹುಡುಕಾಟದಲ್ಲಿ ತೊಡಗಿದ್ದರು. ಭದ್ರತಾ ಪಡೆಗಳತ್ತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದಾಗ, ಒಬ್ಬ ಭಯೋತ್ಪಾದಕ ಹತನಾಗಿದ್ದಾನೆ. ಕಾರ್ಯಾಚರಣೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಜಮ್ಮು ಎಡಿಜಿಪಿ ಮುಕೇಶ್ ಸಿಂಗ್, “ಈ ವರೆಗೆ ಒಬ್ಬ ಭಯೋತ್ಪಾದಕನನ್ನು ಎನ್ಕೌಂಟರ್ ಮಾಡಲಾಗಿದೆ. ಒಬ್ಬ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ” ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News