×
Ad

ಕೇಂದ್ರ ಬಜೆಟ್ ಮಂಡನೆಗೆ ಕ್ಷಣಗಣನೆ : ರಾಷ್ಟ್ರಪತಿಯನ್ನು ಭೇಟಿ ಮಾಡಿದ ಸಚಿವೆ ನಿರ್ಮಲಾ ಸೀತಾರಾಮನ್

Update: 2025-02-01 10:08 IST

Photo | ANI

ಹೊಸದಿಲ್ಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು (ಶನಿವಾರ) ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಇದಕ್ಕೆ ಮುನ್ನ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಹಣಕಾಸು ಇಲಾಖೆ ರಾಜ್ಯ ಸಚಿವ ಪಂಕಜ್ ಚೌಧರಿ ಮತ್ತು ಮುಖ್ಯ ಆರ್ಥಿಕ ಸಲಹೆಗಾರ ಡಾ ವಿ ಅನಂತ ನಾಗೇಶ್ವರನ್ ಸಚಿವರಿಗೆ ಸಾಥ್ ನೀಡಿದ್ದಾರೆ.

ಬಿಳಿ ರೇಷ್ಮೆ ಸೀರೆಯನ್ನು ಧರಿಸಿದ್ದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ದಾಖಲೆಗಳನ್ನು ಹೊಂದಿದ ಟ್ಯಾಬ್ಲೆಟ್ ನ್ನು ಮಾಧ್ಯಮಗಳಿಗೆ ಪ್ರದರ್ಶಿಸಿದ್ದಾರೆ. ಚಿನ್ನದ ಬಣ್ಣದ ರಾಷ್ಟ್ರೀಯ ಲಾಂಛನವನ್ನು ಹೊಂದಿರುವ ಕೆಂಪು ಕವರ್‌ ನೊಳಗೆ ಟ್ಯಾಬ್ಲೆಟ್ ನ್ನು ಭದ್ರತೆಯಿಂದ ಇರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News