ಅಹ್ಮದಾಬಾದ್‌ನಲ್ಲಿ ಪತನಗೊಂಡ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ: ವರದಿ
Update: 2025-06-12 15:03 IST
ಅಹ್ಮದಾಬಾದ್ : ಗುಜರಾತ್‌ನ ಅಹ್ಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನೊಂಡಿದೆ. ಪತನಗೊಂಡ ವಿಮಾನದ ಪ್ರಯಾಣಿಕರ ಪಟ್ಟಿಯಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಹೆಸರು ಇದೆ ಎಂದು India Today ವರದಿ ಮಾಡಿದೆ.
230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನದಲ್ಲಿ 242 ಪ್ರಯಾಣಿಕರಿದ್ದರು. ವಿಮಾನ ಲಂಡನ್‌ಗೆ ಹೊರಟಿತ್ತು.