×
Ad

ಕಾಂಗ್ರೆಸ್ ತೊರೆದ ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದೀಕಿ

Update: 2024-02-08 12:31 IST

ಬಾಬಾ ಸಿದ್ದೀಕಿ (Photo: X/@Baba Siddique)

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದೀಕಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ. ಬಾಬಾ ಸಿದ್ದೀಕಿ 48 ವರ್ಷಗಳಿಂದ ಕಾಂಗ್ರೆಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದರು.

ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಬಾಬಾ ಸಿದ್ದೀಕಿ, "ನಾನು ನನ್ನ ತಾರುಣ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿ 48 ವರ್ಷಗಳ ಮಹತ್ವದ ಪಯಣ ಮಾಡಿದೆ. ಆದರಿಂದು, ನಾನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸುತ್ತಿದ್ದೇನೆ" ಎಂದು ಬರೆದುಕೊಂಡಿದ್ದಾರೆ.

"ನನಗೆ ಹೇಳಲು ಸಾಕಷ್ಟು ವಿಷಯಗಳಿದ್ದರೂ, ಕೆಲ ವಿಷಯಗಳನ್ನು ಹೇಳದಿರುವುದೇ ಉತ್ತಮ ಎಂಬ ಮಾತಿದೆ. ನನ್ನ ಪಯಣದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಧನ್ಯವಾದ ಸಲ್ಲಿಸುತ್ತೇನೆ" ಎಂದೂ ಅವರು ಹೇಳಿದ್ದಾರೆ.

ಬಾಬಾ ಸಿದ್ದೀಕಿ ಅವರು ಅಜಿತ್‌ ಪವಾರ್‌ ನೇತೃತ್ವದ ಎನ್‌ಸಿಪಿ ಸೇರಲಿದ್ದಾರೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News