×
Ad

ಕಾಂಗ್ರೆಸ್‌ ಹಿರಿಯ ನಾಯಕ, ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ನಿಧನ

Update: 2025-12-12 10:44 IST

Photo | PTI

ಹೊಸದಿಲ್ಲಿ: ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇಂದ್ರದ ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಮಹಾರಾಷ್ಟ್ರದ ಲಾತೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಶಿವರಾಜ್ ಪಾಟೀಲ್ ಅವರು ಅಲ್ಪಕಾಲದ ಅನಾರೋಗ್ಯದ ನಂತರ ಶುಕ್ರವಾರ ನಿಧನರಾದರು ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಶಿವರಾಜ್ ಪಾಟೀಲ್ ಅವರು ಪುತ್ರ ಶೈಲೇಶ್ ಪಾಟೀಲ್, ಸೊಸೆ ಅರ್ಚನಾ ಮತ್ತು ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಪಾಟೀಲ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

"ಶಿವರಾಜ್ ಪಾಟೀಲ್ ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಅವರು ಅನುಭವಿ ನಾಯಕರಾಗಿದ್ದರು. ಅವರು ಶಾಸಕ, ಸಂಸದ, ಕೇಂದ್ರ ಸಚಿವ, ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಹಾಗೂ ಲೋಕಸಭೆಯ ಸ್ಪೀಕರ್ ಆಗಿ ಸುದೀರ್ಘಾವಧಿಗೆ ಸಾರ್ವಜನಿಕವಾಗಿ ಸೇವೆ ಸಲ್ಲಿಸಿದ್ದಾರೆ" ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News