Telangana | 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಅಪ್ರಾಪ್ತರು ಸೇರಿದಂತೆ 7 ಮಂದಿ ಪೊಲೀಸ್ ವಶಕ್ಕೆ
ಸಾಂದರ್ಭಿಕ ಚಿತ್ರ (Photo: The Guardian)
ಹೈದರಾಬಾದ್: ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯಲ್ಲಿ ದಸರಾ ಹಬ್ಬದಂದು 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಾಲಕಿಯ ಪೋಷಕರು ಜಮೀನಿನಲ್ಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಏಳು ಮಂದಿ ಆರೋಪಿಗಳು ಬಾಲಕಿಯನ್ನು ಅಪಹರಿಸಿ ಪಕ್ಕದ ಗ್ರಾಮವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಮರುದಿನ ಬೆಳಿಗ್ಗೆ ಆರೋಪಿಗಳು ಬಾಲಕಿಯನ್ನು ಆಕೆಯ ಗ್ರಾಮದ ಸಮೀಪ ಬಿಟ್ಟುಹೋಗಿದ್ದಾರೆ. ಮನೆಗೆ ಮರಳಿದ ಬಳಿಕ ಬಾಲಕಿ ಪೋಷಕರಿಗೆ ಘಟನೆಯ ಬಗ್ಗೆ ತಿಳಿಸಿದ್ದಾಳೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.
ದೂರಿನ ಆಧಾರದಲ್ಲಿ ಪೊಲೀಸರು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (POCSO) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಅಪ್ರಾಪ್ತರು ಸೇರಿದಂತೆ ಏಳು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಆರೋಪಿಗಳು ತೆಲಂಗಾಣದ ಚೆರಿಯಾಲ ಪಟ್ಟಣ ಮತ್ತು ಧೂಲ್‌ಮಿಟ್ಟಾ ಗ್ರಾಮಕ್ಕೆ ಸೇರಿದವರು ಎಂದು ಪೊಲೀಸರು ತಿಳಿಸಿದ್ದಾರೆ.