ಮತ್ತೆ ಏರಿದ ಚಿನ್ನದ ಬೆಲೆ; ಇಂದಿನ ದರವೆಷ್ಟು?

Update: 2026-08-05 17:05 IST

ಸಾಂದರ್ಭಿಕ ಚಿತ್ರ | Photo Credit : freepik

ಭೌಗೋಳಿಕ-ರಾಜಕೀಯ ಉದ್ವಿಗ್ನತೆಗಳು ಕಡಿಮೆಯಾದ ನಂತರ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ.

ಜನವರಿಯಲ್ಲಿ ಅತ್ಯಧಿಕ ಮಟ್ಟಕ್ಕೆ ಏರಿದ್ದ ಚಿನ್ನದ ಬೆಲೆ ನಂತರ ಕುಸಿಯುತ್ತಾ ಬಂದಿರುವುದು ಗ್ರಾಹಕರ ಮೊಗದಲ್ಲಿ ಸಂತಸಕ್ಕೆ ಕಾರಣವಾಗಿತ್ತು. ಜಾಗತಿಕವಾಗಿ ಕಂಡುಬರುತ್ತಿರುವ ಭೌಗೋಳಿಕ- ರಾಜಕೀಯ ಉದ್ವಿಗ್ನತೆಗಳ ಕಾರಣದಿಂದ ಫೆಬ್ರವರಿಯಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಲೇ ಬಂದಿದೆ. ಆದರೆ ಬುಧವಾರ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಭೌಗೋಳಿಕ-ರಾಜಕೀಯ ಸಂಘರ್ಷ ಸಕಾರಾತ್ಮಕವಾಗಿ ಬದಲಾಗುತ್ತಿರುವುದೂ ಮುಖ್ಯ ಕಾರಣವಾಗಿದೆ.

RBI ರೆಪೊ ದರ ಬದಲಾವಣೆ ಮಾಡದೆ ಇರಲು ನಿರ್ಧರಿಸಿರುವುದು ಚಿನ್ನದ ಬೆಲೆಯ ಮೇಲೆ ಹೆಚ್ಚು ಪರಿಣಾಮ ಬೀರದೆ ಇದ್ದರೂ ಸಕಾರಾತ್ಮಕ ಬದಲಾವಣೆ ಕಂಡುಬಂದಿದೆ.

ಜೂನ್ 23ರ ನಂತರ ಬಹುತೇಕ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ 13,000– 13500 ರೂ. ನಡುವೆ ಸ್ಥಿರವಾಗಿದೆ. ಇದೇ ಬೆಲೆಯ ನಡುವೆ ಏರಿಳಿತ ಕಾಣುತ್ತಿದೆ. ಶುಕ್ರವಾರದಿಂದ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿತ್ತು. ಮಂಗಳವಾರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಮಟ್ಟಿಗೆ ಇಳಿಕೆ ದಾಖಲಿಸಿತ್ತು. ಆದರೆ ಬುಧವಾರ ಭಾರೀ ಪ್ರಮಾಣದಲ್ಲಿ ಚಿನ್ನದ ಬೆಲೆ ಏರಿದೆ. ಕಳೆದ ಒಂದು ತಿಂಗಳಿಂದ ಒಂದು ದಿನದಲ್ಲಿ ಕಂಡುಬಂದ ಬಹುದೊಡ್ಡ ಬದಲಾವಣೆ ಇದಾಗಿದೆ.

ಚಿನ್ನದ ದರದಲ್ಲಿ ಭಾರೀ ಏರಿಕೆ:

ಆಗಸ್ಟ್ 5 ರಂದು ಬುಧವಾರ ಬೆಂಗಳೂರಿನ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಮಂಗಳವಾರದ ಬೆಲೆಗೆ ಹೋಲಿಸಿದರೆ ಪ್ರತಿ ಗ್ರಾಂಗೆ 175 ರೂ. ಏರಿಕೆಯಾಗಿ ಹತ್ತು ಗ್ರಾಂ ಬೆಲೆ 1,45,750 ರೂ. ಗೆ ಬಂದು ನಿಂತಿದೆ. ಆಭರಣ ಚಿನ್ನವಾದ 22 ಕ್ಯಾರೆಟ್ ಬೆಲೆಯು ಪ್ರತಿ ಗ್ರಾಂಗೆ 160 ರೂ. ಹೆಚ್ಚಾಗಿದ್ದು, ಹತ್ತು ಗ್ರಾಂಗೆ 1,33,600 ರೂ. ಗೆ ತಲುಪಿದೆ. 18 ಕ್ಯಾರೆಟ್ ಚಿನ್ನವು ಪ್ರತಿ ಗ್ರಾಂಗೆ 131 ರೂ. ಏರಿದ್ದು, ಹತ್ತು ಗ್ರಾಂಗೆ 1,09,310 ರೂ. ಗೆ ತಲುಪಿದೆ.

ಮಂಗಳೂರಿನಲ್ಲಿ ಚಿನ್ನದ ದರವೆಷ್ಟಿದೆ?:

ಆಗಸ್ಟ್ 5 ರಂದು ಬುಧವಾರ ಬೆಳಗಿನ 11 ಗಂಟೆಯ ವಹಿವಾಟಿನಲ್ಲಿ ಮಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಭಾರೀ ಏರಿಕೆ ದಾಖಲಿಸಿದೆ. ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ದರ 14,575 (+175) ರೂ. ರಷ್ಟಕ್ಕೆ ತಲುಪಿದೆ. ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ದರ 13,360 (+160) ರೂ. ಮತ್ತು ಒಂದು ಗ್ರಾಂ 18 ಕ್ಯಾರೆಟ್ ಚಿನ್ನದ ದರ 10,931 (+131) ರೂ. ಬೆಲೆಗೆ ಬಂದು ನಿಂತಿದೆ.

ಸ್ವಲ್ಪ ಏರಿದ ಬೆಳ್ಳಿಯ ದರ:

ಜುಲೈ 11ರಿಂದ ಬೆಳ್ಳಿಯ ದರ ಬಹುತೇಕ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿತ್ತು. ನಡುವೆ ಒಂದೆರಡು ಬಾರಿ ಪ್ರತಿ ಗ್ರಾಂಗೆ 5 ರೂ. ಏರಿದ ಬೆಳ್ಳಿಯ ದರ ಪ್ರತಿ ಕೆಜಿಗೆ 2,40,000 ರೂ.ಗೆ ತಲುಪಿತ್ತು. ಆದರೆ ಕಳೆದ ಒಂದು ವಾರದಿಂದ ಪ್ರತಿ ಕೆಜಿಗೆ 2,35,000 ರೂ.ಗೆ ಸ್ಥಿರವಾಗಿ ನಿಂತಿತ್ತು. ಆದರೆ ಇಂದು ಬುಧವಾರ ಬೆಳ್ಳಿಯ ದರ ಪ್ರತಿ ಗ್ರಾಂಗೆ 5 ರೂ. ಏರಿದ್ದು ಪ್ರತಿ ಕೆಜಿಗೆ 2,40,000 ರೂ.ಗೆ ತಲುಪಿದೆ.

ವಿವಿಧ ನಗರಗಳಲ್ಲಿ 1 ಗ್ರಾಮ್ ಚಿನ್ನದ ದರ (ಬೆಳಗಿನ ವಹಿವಾಟು) ಹೇಗಿದೆ?

ದಿಲ್ಲಿ: 24 ಕ್ಯಾರೆಟ್ ಚಿನ್ನದ ದರ 14,590 (+175) ರೂ., 22 ಕ್ಯಾರೆಟ್ ಚಿನ್ನದ ದರ 13,375 (+160) ರೂ.

ಮುಂಬೈ: 24 ಕ್ಯಾರೆಟ್ ಚಿನ್ನದ ದರ 14,575 (+175) ರೂ., 22 ಕ್ಯಾರೆಟ್ ಚಿನ್ನದ ದರ 13,360 (+160) ರೂ.

ಅಹಮದಾಬಾದ್: 24 ಕ್ಯಾರೆಟ್ ಚಿನ್ನದ ದರ 14,580 (+175) ರೂ., 22 ಕ್ಯಾರೆಟ್ ಚಿನ್ನದ ದರ 13,365 (+160) ರೂ.

ಚೆನ್ನೈ: 24 ಕ್ಯಾರೆಟ್ ಚಿನ್ನದ ದರ 14,575 (+175) ರೂ., 22 ಕ್ಯಾರೆಟ್ ಚಿನ್ನದ ದರ 13,360 (+160) ರೂ.

ಕೋಲ್ಕತ್ತಾ: 24 ಕ್ಯಾರೆಟ್ ಚಿನ್ನದ ದರ 14,575 (+175) ರೂ., 22 ಕ್ಯಾರೆಟ್ ಚಿನ್ನದ ದರ 13,360 (+160) ರೂ.

ಹೈದರಾಬಾದ್: 24 ಕ್ಯಾರೆಟ್ ಚಿನ್ನದ ದರ 14,575 (+175) ರೂ., 22 ಕ್ಯಾರೆಟ್ ಚಿನ್ನದ ದರ 13,360 (+160) ರೂ.

ಜೈಪುರ: 24 ಕ್ಯಾರೆಟ್ ಚಿನ್ನದ ದರ 14,590 (+175) ರೂ., 22 ಕ್ಯಾರೆಟ್ ಚಿನ್ನದ ದರ 13,375 (+160) ರೂ.

ಚಂಡೀಗಢ: 24 ಕ್ಯಾರೆಟ್ ಚಿನ್ನದ ದರ 14,590 (+175) ರೂ., 22 ಕ್ಯಾರೆಟ್ ಚಿನ್ನದ ದರ 13,375 (+160) ರೂ.

ಲಕ್ನೋ: 24 ಕ್ಯಾರೆಟ್ ಚಿನ್ನದ ದರ 14,590 (+175) ರೂ., 22 ಕ್ಯಾರೆಟ್ ಚಿನ್ನದ ದರ 13,375 (+160) ರೂ.

ಕೊಚ್ಚಿ: 24 ಕ್ಯಾರೆಟ್ ಚಿನ್ನದ ದರ 14,575 (+175) ರೂ., 22 ಕ್ಯಾರೆಟ್ ಚಿನ್ನದ ದರ 13,360 (+160) ರೂ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News