×
Ad

ಜಾರ್ಖಂಡ್‌ | ಗೂಡ್ಸ್ ರೈಲುಗಳ ಮುಖಾಮುಖಿ ಢಿಕ್ಕಿ ; ಇಬ್ಬರು ಲೋಕೋ ಪೈಲೆಟ್‌ ಗಳು ಮೃತ್ಯು

Update: 2025-04-01 10:24 IST

Photo : PTI

ರಾಂಚಿ: ಜಾರ್ಖಂಡ್‌ ನ ಸಾಹೇಬ್‌ ಗಂಜ್ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ ಎರಡು ಗೂಡ್ಸ್ ರೈಲುಗಳು ಮುಖಾಮುಖಿ ಢಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲೆಟ್ ಗಳು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗಿನ ಜಾವ 3:00 ಗಂಟೆ ಸುಮಾರಿಗೆ ಬರ್ಹೈಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ(NTPC) ಡಿಕ್ಕಿ ಹೊಡೆದ ಗೂಡ್ಸ್ ರೈಲುಗಳನ್ನು ನಿರ್ವಹಿಸುತ್ತಿತ್ತು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಿಸಲು ಈ ರೈಲು ಮಾರ್ಗವನ್ನು ಬಳಸಲಾಗುತ್ತಿತ್ತು.

"ಎರಡೂ ಸರಕು ರೈಲುಗಳ ಲೋಕೊ ಪೈಲೆಟ್ ಗಳು ರೈಲು ಅಪಘಾತದಲ್ಲಿ ಮೃತಪಟ್ಟಿದ್ದಾರೆ" ಎಂದು ಸಾಹೇಬ್‌ಗಂಜ್‌ನ ಉಪ-ವಿಭಾಗೀಯ ಪೊಲೀಸ್ ಅಧಿಕಾರಿ ಕಿಶೋರ್ ಟಿರ್ಕಿ ಪಿಟಿಐಗೆ ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ರೈಲು ಮಾರ್ಗವು ಬಿಹಾರದ ಭಾಗಲ್ಪುರ್ ಜಿಲ್ಲೆಯ ಎನ್‌ಟಿಪಿಸಿಯ ಕಹಲ್‌ಗಾಂವ್ ಸೂಪರ್ ಥರ್ಮಲ್ ಪವರ್ ಸ್ಟೇಷನ್ ಮತ್ತು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಫರಕ್ಕಾ ವಿದ್ಯುತ್ ಸ್ಥಾವರದ ನಡುವೆ ಸಂಪರ್ಕ ಕಲ್ಪಿಸುತ್ತದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News