×
Ad

ಬಿಹಾರ | ಬಿಜೆಪಿ ನಾಯಕನನ್ನು ಗುಂಡಿಕ್ಕಿ ಹತ್ಯೆ

Update: 2025-07-05 10:13 IST

Photo | NDTV

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಉದ್ಯಮಿ, ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ 'ಪನಾಚೆ' ಹೋಟೆಲ್ ಬಳಿ ಗೋಪಾಲ್ ಖೇಮ್ಕಾ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿದ್ದಾರೆ. ತಕ್ಷಣ ಖೇಮ್ಕಾ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಖೇಮ್ಕಾ ಬಂಕಿಪೋರ್ ಕ್ಲಬ್‌ನಿಂದ ಹಿಂತಿರುಗುತ್ತಿದ್ದಾಗ ಘಟನೆ ನಡೆದಿದೆ. ಪೊಲೀಸ್ ಠಾಣೆಯಿಂದ ಕೇವಲ 300 ಮೀಟರ್ ದೂರದಲ್ಲಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಖೇಮ್ಕಾ ವೃತ್ತಿಯಲ್ಲಿ ಉದ್ಯಮಿಯಾಗಿದ್ದರು. ಅವರ ಪುತ್ರ ಗುಂಜನ್ ಖೇಮ್ಕಾ ಅವರನ್ನು ಮೂರು ವರ್ಷಗಳ ಹಿಂದೆ ಇದೇ ರೀತಿ ಹತ್ಯೆ ಮಾಡಲಾಗಿತ್ತು.

ಪೂರ್ಣಿಯಾ ಕ್ಷೇತ್ರದ ಸ್ವತಂತ್ರ ಸಂಸದ ಪಪ್ಪು ಯಾದವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿತೀಶ್ ಕುಮಾರ್ ಸರಕಾರವನ್ನು ಅವರು ಟೀಕಿಸಿದ್ದು, ಬಿಹಾರದಲ್ಲಿ ಯಾರೂ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ಪಾಟ್ನಾ ಎಸ್ಪಿ ಕಾರ್ತಿಕೇಯ ಶರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,  ಅಪರಾಧಿಗಳ ಪತ್ತೆಗೆ ವಿಶೇಷ ತಂಡವನ್ನು ರಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News