ಗುಜರಾತ್ ನಲ್ಲಿ ಏರ್ ಇಂಡಿಯಾ ವಿಮಾನ ಪತನ | ವಿಮಾನದ ಫಸ್ಟ್ ಆಫೀಸರ್ ಕ್ಲೈವ್ ಕುಂದರ್ ಮಂಗಳೂರು ಮೂಲದವರು!
ಅಹಮದಾಬಾದ್: ಗುರುವಾರ ಮಧ್ಯಾಹ್ನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್‌ನ ಮೇಘನಿ ನಗರದ ವಸತಿ ಪ್ರದೇಶಕ್ಕೆ ಅಪ್ಪಳಿಸಿ ಪತನವಾದ ಏರ್ ಇಂಡಿಯಾ ವಿಮಾನದ ಫಸ್ಟ್ ಆಫೀಸರ್ ಆಗಿದ್ದ ಕ್ಲೈವ್ ಕುಂದರ್ ಮಂಗಳೂರು ಮೂಲದವರು ಎಂದು ತಿಳಿದು ಬಂದಿದೆ.
ಪ್ರಸಕ್ತ ಮುಂಬೈ ನಿವಾಸಿಯಾಗಿರುವ ಕ್ಲೈವ್ ಕುಂದರ್ ಏರ್ ಇಂಡಿಯಾ ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನದಲ್ಲಿ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುರುವಾರ ಮಧ್ಯಾಹ್ನ 1:38 ಕ್ಕೆ ಟೇಕ್ ಆಫ್ ಆಗಿತ್ತು.
1,100 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದ ಕ್ಲೈವ್ ಕುಂದರ್ ಅವರು, 8,200 ಗಂಟೆಗಳಿಗೂ ಹೆಚ್ಚು ಹಾರಾಟದ ಟ್ರೈನೀ ಕ್ಯಾಪ್ಟನ್ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರ ಜೊತೆ ಕಾರ್ಯನಿರ್ವಹಿಸುತ್ತಿದ್ದರು. ಎರಡು ಶಿಶು ಸೇರಿದಂತೆ ಕನಿಷ್ಠ 232 ಪ್ರಯಾಣಿಕರು, 12 ಸಿಬ್ಬಂದಿಗಳಿದ್ದ ವಿಮಾನವು ಟೇಕ್ ಆಫ್ ಆದ 5 ನಿಮಿಷಕ್ಕೆ ಪತನವಾಗಿತ್ತು.