×
Ad

ಗುಜರಾತ್ | ಗೇಮಿಂಗ್ ಝೋನ್‌ನಲ್ಲಿ ಭಾರೀ ಅಗ್ನಿ ಅವಘಡ ; ಕನಿಷ್ಠ 20 ಮಂದಿ ಮೃತ್ಯು, ಹಲವರಿಗೆ ಗಾಯ

Update: 2024-05-25 21:00 IST

PC : PTI

ರಾಜ್‌ಕೋಟ್ : ಗುಜರಾತ್‌ನ ರಾಜಕೋಟ್‌ನಲ್ಲಿರುವ ಗೇಮಿಂಗ್ ಝೋನ್‌ ನಲ್ಲಿ ಶನಿವಾರ ಸಂಜೆ ನಡೆದ ಅಗ್ನಿ ಅವಘಡದಲ್ಲಿ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ ಹಾಗೂ ಹಲವರು ಗಾಯಗೊಂಡಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಬೇಸಿಗೆ ರಜೆಯ ಕಾರಣದಿಂದ ಅಲ್ಲಿ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ಆದುದರಿಂದ ಈ ಅವಘಡದಲ್ಲಿ ಮಕ್ಕಳೇ ಹೆಚ್ಚು ಮೃತಪಟ್ಟಿದ್ದಾರೆ, ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್, ‘‘ಟಿಆರ್‌ಪಿ ಗೇಮಿಂಗ್ ವಲಯದಲ್ಲಿ ಬೆಂಕಿ ಹತ್ತಿಕೊಂಡಿತು. ಇದರಿಂದ ಕೆಲವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ’’ ಎಂದಿದ್ದಾರೆ.

‘‘ರಾಜ್‌ಕೋಟ್‌ ನ ಗೇಮಿಂಗ್ ರೆನ್‌ನಲ್ಲಿ ಕೂಡಲೇ ರಕ್ಷಣೆ ಹಾಗೂ ಪರಿಹಾರ ಕಾರ್ಯಾಚರಣೆ ನಡೆಸುವಂತೆ ನಗರಾಡಳಿತಕ್ಕೆ ಸೂಚನೆ ನೀಡಲಾಗಿದೆ. ಗಾಯಗೊಂಡವರಿಗೆ ಕೂಡಲೇ ಚಿಕಿತ್ಸೆ ನೀಡುವ ವ್ಯವಸ್ಥೆಗೆ ಆದ್ಯತೆ ನೀಡುವಂತೆ ಕೂಡ ನಿರ್ದೇಶಿಸಲಾಗಿದೆ’’ ಎಂದು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ. 

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News