ಗುರುಗ್ರಾಮ್ ಮಸೀದಿಗೆ ಬೆಂಕಿ ಹಚ್ಚಿ ಧರ್ಮಗುರು ಹತ್ಯೆ: ವರದಿ
ಗುರುಗ್ರಾಮ್: ಗುರುಗ್ರಾಮ್ ನ ಮಸೀದಿಯೊಂದರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೆಕ್ಟರ್ 57ರಲ್ಲಿರುವ ಅಂಜುಮನ್ ಜುಮಾ ಮಸೀದಿಗೂ ಬೆಂಕಿ ಹಚ್ಚಲಾಗಿದೆ. ಅಗ್ನಿಶಾಮಕ ನಿಯಂತ್ರಣ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ಹತೋಟಿಗೆ ತಂದವು.
ಕೇಂದ್ರ ಸಚಿವ ಹಾಗೂ ಗುರುಗ್ರಾಮ್ ಸಂಸದ ರಾವ್ ಇಂದರ್ ಜಿತ್ ಸಿಂಗ್ ಅವರು ಗುರುಗ್ರಾಮ್ನ ಮಸೀದಿಯೊಂದರ ಮೇಲೆ ದಾಳಿ ನಡೆಸಲಾಗಿದ್ದು, ಇಮಾಮ್ ಸೇರಿದಂತೆ ಇಬ್ಬರಿಗೆ ಗುಂಡು ಹಾರಿಸಲಾಗಿದೆ NDTVಗೆ ಖಚಿತಪಡಿಸಿದ್ದಾರೆ.
"ನಿನ್ನೆ, ನಾನು ಗೃಹ ಖಾತೆಯ ರಾಜ್ಯ ಸಚಿವರೊಂದಿಗೆ ಮಾತನಾಡಿದ್ದೇನೆ. ಇಪ್ಪತ್ತು ಕಂಪನಿ ಅರೆಸೇನಾ ಪಡೆಗಳನ್ನು ಕಳುಹಿಸಲಾಗಿದೆ. ನುಹ್ ಘಟನೆಯು ಗುರುಗ್ರಾಮ್ನ ಮೇಲೂ ಪರಿಣಾಮ ಬೀರಿದೆ. ನಿನ್ನೆ, ಗುರುಗ್ರಾಮ್ ನ ಮಸೀದಿಯ ಮೇಲೆ ದಾಳಿ ನಡೆದಿತ್ತು, ಇದರಲ್ಲಿ ಇಮಾಮ್ ಸೇರಿದಂತೆ ಇಬ್ಬರ ಮೇಲೆ ಗುಂಡು ಹಾರಿಸಲಾಗಿದೆ ಈ ಪ್ರಕರಣದಲ್ಲಿ ಐದು ಜನರನ್ನು ಬಂಧಿಸಲಾಗಿದೆ," ಎಂದು ಸಚಿವರು ಹೇಳಿದರು.
ಹರ್ಯಾಣದಲ್ಲಿ ನಿನ್ನೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕರು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 30 ಮಂದಿ ಗಾಯಗೊಂಡಿದ್ದಾರೆ. ಗುರುಗ್ರಾಮ್ಗೆ ಹೊಂದಿಕೊಂಡಿರುವ ಹರ್ಯಾಣದ ನುಹ್ ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಘರ್ಷಣೆ ಪ್ರಾರಂಭವಾಯಿತು