ಅ. 17ರಂದು ಹರ್ಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ
Update: 2024-10-12 12:54 IST
Photo:X/@narendramodi
ಹೊಸದಿಲ್ಲಿ: ಅಕ್ಟೋಬರ್ 17ರಂದು ಎರಡನೇ ಬಾರಿಗೆ ನಯಾಬ್ ಸಿಂಗ್ ಸೈನಿ ಹರ್ಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ 8ರಂದು ಪ್ರಕಟಗೊಂಡಿದ್ದ ಚುನಾವಣಾ ಫಲಿತಾಂಶದಲ್ಲಿ ಎಲ್ಲ ಚುನಾವಣೋತ್ತರ ಸಮೀಕ್ಷೆಗಳನ್ನು ಹುಸಿ ಮಾಡಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿಯು ಸತತ ಮೂರನೆಯ ಬಾರಿ ಅಧಿಕಾರಕ್ಕೆ ಮರಳಿತ್ತು.
ಹರ್ಯಾಣ ವಿಧಾನಸಭಾ ಚುನಾವಣಾ ಫಲಿತಾಂಶದ ಕುರಿತು ನಡೆದಿದ್ದ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದ್ದು, ಕಾಂಗ್ರೆಸ್ ಭಾರಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದವು.