×
Ad

ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲೇ ತುರ್ತು ಭೂಸ್ಪರ್ಶ : ಕಾರು ಜಖಂ

Update: 2025-06-08 16:56 IST

ರುದ್ರಪ್ರಯಾಗ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್‌ವೊಂದು ತಾಂತ್ರಿಕ ದೋಷದಿಂದ ರುದ್ರಪ್ರಯಾಗ ಜಿಲ್ಲೆಯ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಕಾರೊಂದು ಜಖಂಗೊಂಡಿದೆ.   

ಹೆಲಿಕಾಪ್ಟರ್‌ನಲ್ಲಿದ್ದ ಐವರು ಪ್ರಯಾಣಿಕರು ಮತ್ತು ಓರ್ವ ಪೈಲಟ್ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತ ವೈರಲ್ ವೀಡಿಯೊದಲ್ಲಿ, ಕ್ರಿಸ್ಟಲ್ ಏವಿಯೇಷನ್ ​​ಪ್ರೈವೇಟ್ ಲಿಮಿಟೆಡ್‌ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶವಾಗುತ್ತಿರುವುದು ಕಂಡು ಬಂದಿದೆ. ವಿಮಾನದ ಒಂದು ಭಾಗ ಹೆದ್ದಾರಿಯಲ್ಲಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ತಗುಲಿ ಕಾರು ಜಖಂಗೊಂಡಿದೆ.

ಹೆಲಿಕಾಪ್ಟರ್ ಬಡಾಸು ವಾಯು ನೆಲೆಯಿಂದ ಟೇಕ್ ಆಫ್ ಆಗಿ ಕೇದಾರನಾಥಕ್ಕೆ ತೆರಳುತ್ತಿತ್ತು. ಆದರೆ, ತಾಂತ್ರಿಕ ದೋಷದ ನಂತರ ಹೆದ್ದಾರಿಯಲ್ಲಿ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ನಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಪ್ರಯಾಣಿಕರಿದ್ದರು. ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ನೆಲಕ್ಕೆ ಅಪ್ಪಳಿಸುತ್ತಿರುವುದನ್ನು ನೋಡಿ ಜನರು ಭಯಭೀತರಾಗಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News