×
Ad

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಇಂದು (ಜು.4) ಹೇಮಂತ್ ಸೊರೇನ್ ಪ್ರಮಾಣ ವಚನ

Update: 2024-07-04 14:54 IST

Photo: X/@HemantSorenJMM

ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಚೆಂಪೈ ಸೊರೇನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮರುದಿನ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ರಾಜ್ಯದಲ್ಲಿ ಸರಕಾರ ರಚಿಸುವಂತೆ ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖ್ಯಸ್ಥ ಹೇಮಂತ್ ಸೊರೇನ್ ಅವರಿಗೆ ಆಹ್ವಾನ ನೀಡಿದ್ದಾರೆ.

ಇಂದು ಸಂಜೆ ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರ ಆಹ್ವಾನದ ಮೇರೆಗೆ ಹೇಮಂತ್ ಸೊರೇನ್ ಹಾಗೂ ಇಂಡಿಯಾ ಮೈತ್ರಿಕೂಟದ ನಾಯಕರು ಇಂದು ರಾಜಭವನಕ್ಕೆ ಭೇಟಿ ನೀಡಿದರು.

ಈ ಮೊದಲು ಜುಲೈ 7ರಂದು ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜೆಎಂಎಂ ಪಕ್ಷದ ಪ್ರಧಾನ ಕಾರ್ಯದರ್ಶಿ ಸುಪ್ರಿಯೊ ಭಟ್ಟಾಚಾರ್ಯ ಹೇಳಿದ್ದಾಗಿ ವರದಿಯಾಗಿತ್ತು.

ಐದು ತಿಂಗಳ ಕಾಲ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಚಂಪೈ ಸೊರೇನ್, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ಹೇಮಂತ್ ಸೊರೇನ್ ಮತ್ತೆ ಮುಖ್ಯಮಂತ್ರಿಯಾಗುವ ಹಾದಿಯನ್ನು ಸುಗಮಗೊಳಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News