×
Ad

ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ ಮೋದಿ, ಯೋಗಿ ಜೈಲಿನಲ್ಲಿರುತ್ತಿದ್ದರು: ನಿಶ್ಚಲಾನಂದ ಸರಸ್ವತಿ

Update: 2024-12-12 12:56 IST

ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ (Photo: X)

ಹೊಸದಿಲ್ಲಿ: ʼಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದಿದ್ದರೆ ಮೋದಿ ಮತ್ತು ಯೋಗಿ ಜೈಲು ಪಾಲಾಗುತ್ತಿದ್ದರುʼ ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ ಅವರು ವಾಗ್ಧಾಳಿ ನಡೆಸಿದ್ದಾರೆ ಎಂದು deccanherald.com ವರದಿ ಮಾಡಿದೆ.

ಮಂಗಳವಾರ ಉಜ್ಜಯಿನಿಯ ಶ್ರೀ ಮಹಾಕಾಳೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಧರ್ಮಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಂಕರಾಚಾರ್ಯ ನಿಶ್ಚಲಾನಂದ ಸರಸ್ವತಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಸಿಎಂ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಸದೃಢ ನ್ಯಾಯಾಂಗ ವ್ಯವಸ್ಥೆ ಇದ್ದರೆ ಮೋದಿ ಮತ್ತು ಯೋಗಿ ಜೈಲು ಪಾಲಾಗುತ್ತಿದ್ದರು ಎಂದು ಹೇಳಿದ್ದಾರೆ.

ಈ ಕುರಿತು ಹರೀಶ್ ತಿವಾರಿ ಎಂಬವರು ಎಕ್ಸ್ ನಲ್ಲಿ ಮಾಡಿದ್ದ ಪೋಸ್ಟ್ ನ್ನು ಹಂಚಿಕೊಂಡ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, 'ನಿರ್ಭೀತ ಜಗದ್ಗುರು 'ಎಂದು ಕರೆದಿದ್ದಾರೆ. ಸುಬ್ರಮಣಿಯನ್ ಸ್ವಾಮಿ ಈ ಹಿಂದೆ ಹಲವು ಬಾರಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ನವೆಂಬರ್‌ ನಲ್ಲಿ ಮೋದಿಯನ್ನು 'ಸುಳ್ಳುಗಾರ' ಎಂದು ಕರೆದಿದ್ದ ಸ್ವಾಮಿ, 2014ರ ಲೋಕಸಭೆ ಚುನಾವಣೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಕ್ಕಾಗಿ ಪ್ರಾಯಶ್ಚಿತ್ತ ಪಡುವುದಾಗಿ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News