×
Ad

ಮಥುರಾದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ: ಯಥಾಸ್ಥಿತಿಗೆ ಆದೇಶಿಸಿದ ಸುಪ್ರೀಂಕೋರ್ಟ್

Update: 2023-08-16 14:57 IST

Photo: PTI

ಹೊಸದಿಲ್ಲಿ: ಉತ್ತರ ಪ್ರದೇಶದ ಮಥುರಾದ ಕೃಷ್ಣ ಜನ್ಮಭೂಮಿ ಬಳಿಯ ಅಕ್ರಮ ಕಟ್ಟಡಗಳನ್ನು ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ನಡೆಸುತ್ತಿರುವ ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು ಯಥಾಸ್ಥಿತಿಗೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್, ಸಂಜಯ್ ಕುಮಾರ್ ಹಾಗೂ ಎಸ್ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣದಲ್ಲಿ ಕೇಂದ್ರ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

"10 ದಿನಗಳ ಅವಧಿಗೆ ವಿಷಯಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಇರಲಿ. ಒಂದು ವಾರದ ನಂತರ ಪಟ್ಟಿ ಮಾಡಿ" ಎಂದು ಪೀಠ ಹೇಳಿದೆ.

ಅರ್ಜಿದಾರ ಯಾಕೂಬ್ ಶಾ ಪರ ವಾದ ಮಂಡಿಸಿದ ವಕೀಲರು, "100 ಮನೆಗಳನ್ನು ನೆಲಸಮ ಮಾಡಲಾಗಿದೆ. 70-80 ಮನೆಗಳು ಉಳಿದಿವೆ. ಇಡೀ ವಿಷಯವು ನಿರುಪಯುಕ್ತವಾಗುತ್ತದೆ. ಉತ್ತರ ಪ್ರದೇಶದ ನ್ಯಾಯಾಲಯಗಳು ಮುಚ್ಚಲ್ಪಟ್ಟ ದಿನದಂದು ಈ ಕಾರ್ಯಾಚರಣೆ ನಡೆಸಿದರು ”ಎಂದು ಪೀಠಕ್ಕೆ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News