×
Ad

ಗುಜರಾತ್ | ಬಾಂಗ್ಲಾದೇಶದ ಪ್ರಜೆಗಳು ಸೇರಿದಂತೆ 500ಕ್ಕೂ ಅಧಿಕ ಅಕ್ರಮ ವಲಸಿಗರ ಬಂಧನ

Update: 2025-04-26 10:47 IST

Photo | timesofindia

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಅಕ್ರಮವಾಗಿ ನೆಲೆಸಿದ್ದ 500ಕ್ಕೂ ಅಧಿಕ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ. ಅವರಲ್ಲಿ ಹೆಚ್ಚಿನವರು ಬಾಂಗ್ಲಾದೇಶದ ಪ್ರಜೆಗಳು ಎಂದು ವರದಿಯಾಗಿದೆ. 

ಅಹಮದಾಬಾದ್ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ ಕಾರ್ಯಾಚರಣೆ ನಡೆಸಿ ವಿದೇಶಿ ವಲಸಿಗರನ್ನು ಬಂಧಿಸಿದ್ದಾರೆ. 500ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ವಿಚಾರಣೆ ನಡೆಸಲಾಗುತ್ತಿದೆ. ಮಾನ್ಯ ದಾಖಲೆಗಳಿಲ್ಲದೆ ಕಂಡುಬಂದರೆ ಅವರನ್ನು ಗಡಿಪಾರು ಮಾಡಲಾಗುವುದು ಎಂದು ಅಹಮದಾಬಾದ್ ಅಪರಾಧ ವಿಭಾಗದ ಉಪ ಆಯುಕ್ತ ಅಜಿತ್ ರಾಜಿಯಾನ್ ಹೇಳಿದ್ದಾರೆ.

ಅಹಮದಾಬಾದ್‌ನಲ್ಲಿ ಮುಂಜಾನೆ 3 ಗಂಟೆಗೆ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಬಂಧಿತರನ್ನು ಕಂಕರಿಯಾ ಫುಟ್ಬಾಲ್ ಮೈದಾನದಲ್ಲಿರಿಸಲಾಗಿದೆ ಎಂದು ತಿಳಿದು ಬಂದಿದೆ.

ಉಪ ಪೊಲೀಸ್ ಆಯುಕ್ತ ರಾಜ್‌ದೀಪ್‌ ಸಿಂಗ್ ನಕುಮ್ ಈ ಕುರಿತು ಪ್ರತಿಕ್ರಿಯಿಸಿ, ಗುಪ್ತಚರ ಮಾಹಿತಿ ಆಧರಿಸಿ ಅಕ್ರಮ ವಲಸಿಗರನ್ನು ಬಂಧಿಸಲಾಗಿದೆ. ಅವರು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿ ನಕಲಿ ದಾಖಲೆಗಳೊಂದಿಗೆ ವಾಸಿಸುತ್ತಿದ್ದರು. ಪರಿಶೀಲನೆ ಮತ್ತು ವಿಚಾರಣೆಯ ನಂತರ ಅವರನ್ನು ಗಡೀಪಾರು ಮಾಡಲಾಗುವುದು ಎಂದು ಹೇಳಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News