ಲೋಕಸಭೆಯ ಸ್ಪೀಕರ್ ಚಹಾ ಕೂಟ ಬಹಿಷ್ಕರಿಸಿದ INDIA ಮೈತ್ರಿಕೂಟ

Update: 2026-08-13 22:30 IST

Photo Credit : PTI 

ಹೊಸದಿಲ್ಲಿ, ಆ. 13: ಲೋಕಸಭೆಯ ಕಲಾಪಗಳು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟ ನಂತರ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಆಯೋಜಿಸಿದ್ದ ಸಾಂಪ್ರದಾಯಿಕ ಚಹಾ ಕೂಟವನ್ನು ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಬಹಿಷ್ಕರಿಸಿದವು.

ಆದರೆ, ದ್ರಾವಿಡ ಮುನ್ನೇಟ್ರ ಕಳಗಂ (DMK) ನಾಯಕಿ ಕನಿಮೋಳಿ ಅವರು ಈ ಸಾಂಪ್ರದಾಯಿಕ ಕೂಟದಲ್ಲಿ ಪಾಲ್ಗೊಂಡರು ಎಂದು ಮೂಲಗಳು ತಿಳಿಸಿವೆ.

ಇನ್ನೊಂದೆಡೆ, ರಾಜ್ಯಸಭಾ ಸಭಾಪತಿ ಸಿ.ಪಿ. ರಾಧಾಕೃಷ್ಣನ್ ಆಯೋಜಿಸಿದ್ದ ಚಹಾ ಕೂಟದಲ್ಲಿ ರಾಜ್ಯಸಭೆಯ ವಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಪ್ರತಿಪಕ್ಷದ ನಾಯಕರು ಭಾಗವಹಿಸಿದರು.

ಮೂಲಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಇತರ ಹಲವಾರು ಹಿರಿಯ ನಾಯಕರು ಹಾಗೂ ಸಚಿವರು ಲೋಕಸಭಾ ಸ್ಪೀಕರ್ ಚೇಂಬರ್ ನಲ್ಲಿ ನಡೆದ ಚಹಾ ಕೂಟದಲ್ಲಿ ಉಪಸ್ಥಿತರಿದ್ದರು.

ಕಾಂಗ್ರೆಸ್, SP, TMC ಮತ್ತು ‘INDIA’ ಮೈತ್ರಿಕೂಟದ ಇತರ ಪಕ್ಷಗಳ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿಲ್ಲ ಎಂದು ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಎರಡೂ ಸದನಗಳ ಕಲಾಪಗಳು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟ ನಂತರ ಲೋಕಸಭಾ ಸ್ಪೀಕರ್ ಮತ್ತು ರಾಜ್ಯಸಭಾ ಸಭಾಪತಿಯವರು ತಮ್ಮ ಚೇಂಬರ್ ಗಳಲ್ಲಿ ಚಹಾ ಕೂಟವನ್ನು ಆಯೋಜಿಸುವುದು ವಾಡಿಕೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News