×
Ad

ಕೆನಡಾ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ ಭಾರತ: ಐದು ದಿನಗಳೊಳಗೆ ದೇಶ ತೊರೆಯಲು ಸೂಚನೆ

Update: 2023-09-19 11:00 IST

Photo: X/@JustinTrudeau

ಹೊಸದಿಲ್ಲಿ: ಸಿಖ್‌ ಪ್ರತ್ಯೇಕತಾವಾದಿ ನಾಯಕ ಹತ್ಯೆಯಲ್ಲಿ ಭಾರತದ ಕೈವಾಡ ಇದೆ ಎಂದು ಭಾರತೀಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದ ಕೆಲವೇ ಗಂಟೆಗಳ ನಂತರ ಭಾರತ ಸರ್ಕಾರ ಮಂಗಳವಾರ ಕೆನಡಾದ ಉನ್ನತ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟಿಸಿದೆ.

ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ಇಂದು ಕರೆಸಿ, ಕೆನಡಾದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕುವ ಭಾರತ ಸರ್ಕಾರದ ನಿರ್ಧಾರದ ಬಗ್ಗೆ ತಿಳಿಸಲಾಯಿತು. ಮುಂದಿನ ಐದು ದಿನದೊಳಗೆ ಭಾರತವನ್ನು ತೊರೆಯುವಂತೆ ಸಂಬಂಧಪಟ್ಟ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News