×
Ad

ತನ್ನ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ: ಪ್ರಧಾನಿ ಮೋದಿ

Update: 2023-07-26 20:46 IST

ಪ್ರಧಾನಿ ನರೇಂದ್ರ ಮೋದಿ (Photo: PTI)

ಹೊಸದಿಲ್ಲಿ: ತನ್ನ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಅಗ್ರ ಮೂರು ಆರ್ಥಿಕತೆಗಳಲ್ಲಿ ಒಂದಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಹೇಳಿದ್ದಾರೆ.

"ನನ್ನ ಮೂರನೇ ಅವಧಿಯಲ್ಲಿ, ಭಾರತವು ಅಗ್ರ ಮೂರು ಆರ್ಥಿಕತೆಗಳ ಪಟ್ಟಿಯಲ್ಲಿ ಬಂದು ನಿಲ್ಲುತ್ತದೆ. ಇದು ಮೋದಿಯ ಗ್ಯಾರಂಟಿ" ಎಂದು ಅವರು ಹೇಳಿದ್ದಾರೆ.

"ನಮ್ಮ ಮೊದಲ ಅವಧಿಯಲ್ಲಿ, ಭಾರತವು ಆರ್ಥಿಕತೆಯ ವಿಷಯದಲ್ಲಿ 10 ನೇ ಸ್ಥಾನದಲ್ಲಿತ್ತು. ನನ್ನ ಎರಡನೇ ಅವಧಿಯಲ್ಲಿ, ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿದೆ. ಮೂರನೇ ಅವಧಿಯಲ್ಲಿ, ದೇಶದ ಆರ್ಥಿಕತೆಯು ವಿಶ್ವದ ಅಗ್ರ ಮೂರರಲ್ಲಿರಲಿದೆ" ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News