×
Ad

ಭಾರತದ ಅತಿ ಉದ್ದದ ಸಮುದ್ರ ಸೇತುವೆ ಜನವರಿ 12ಕ್ಕೆ ಲೋಕಾರ್ಪಣೆ

Update: 2023-12-31 20:55 IST

Photo : ANI

ಮುಂಬೈ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (ಎಂಟಿಎಚ್‌ಎಲ್) ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 12 ರಂದು ಉದ್ಘಾಟಿಸಲಿದ್ದಾರೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ರವಿವಾರ ತಿಳಿಸಿದ್ದಾರೆ ಎಂದು ndtv ವರದಿ ಮಾಡಿದೆ.

ಮುಂಬೈನ ಸೆವ್ರಿ ಮತ್ತು ರಾಯಗಡ್ ಜಿಲ್ಲೆಯ ನ್ಹವಾ ಶೇವಾ ಪ್ರದೇಶದ ನಡುವಿನ 21.8 ಕಿಲೋಮೀಟರ್ ಉದ್ದದ ಸೇತುವೆಯು ಈಗಿನ ಪ್ರಯಾಣ ಅವಧಿ ಎರಡು ಗಂಟೆಗಳಿಂದ, ಸುಮಾರು 15-20 ನಿಮಿಷಗಳಿಗೆ ಕಡಿಮೆ ಮಾಡುತ್ತದೆ ಎಂದು ಶಿಂಧೆ ಹೇಳಿದರು.

"ಪ್ರಧಾನಿ ನರೇಂದ್ರ ಮೋದಿ ಜನವರಿ 12 ರಂದು ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ಅನ್ನು ಉದ್ಘಾಟಿಸಲಿದ್ದಾರೆ. ಈ ಸೇತುವೆಯು ಆರ್ಥಿಕ ಅಭಿವೃದ್ಧಿ ಮತ್ತು ಅದಕ್ಕೆ ಸಂಬಂಧಿಸಿದ ಪ್ರದೇಶಗಳಲ್ಲಿ ಬೆಳವಣಿಗೆಯನ್ನು ತರಲಿದೆ" ಎಂದು ಶಿಂಧೆ ಸುದ್ದಿಗಾರರಿಗೆ ತಿಳಿಸಿದರು. ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ ರಸ್ತೆಯು ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ ಸಂಪರ್ಕ ಕಲ್ಪಿಸುತ್ತದೆ. ಇದು ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News