×
Ad

ಶುಭಾಂಶು ಶುಕ್ಲಾ ಅಂತರಿಕ್ಷಯಾನಕ್ಕೆ ಕೊನೆಗೂ ಮುಹೂರ್ತ: ಜೂನ್ 22ಕ್ಕೆ ಯಾನ ಆರಂಭ

Update: 2025-06-18 12:11 IST

ಶುಭಾಂಶು ಶುಕ್ಲಾ (Photo credit:X/@DrVedu)

ಹೊಸದಿಲ್ಲಿ: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಆ್ಯಕ್ಸಿಯಂ -4 ಮಿಷನ್ ಅನ್ನು ಜೂನ್ 22ಕ್ಕೆ ನಡೆಸಲು ನಿರ್ಧರಿಸಲಾಗಿದೆ ಎಂದು ಆ್ಯಕ್ಸಿಯಂ ಸ್ಪೇಸ್ ಬುಧವಾರ ಪ್ರಕಟಿಸಿದೆ.

ರಷ್ಯಾದ ವಿಭಾಗದಲ್ಲಿ ಇತ್ತೀಚೆಗೆ ನಡೆದ ದುರಸ್ತಿಗಳ ನಂತರ ಕಕ್ಷೆಯ ಪ್ರಯೋಗಾಲಯದಲ್ಲಿನ ಕಾರ್ಯಾಚರಣೆಗಳನ್ನು ಮೌಲ್ಯಮಾಪನ ಮಾಡಲು ಇದು ಅವಕಾಶ ನೀಡಲಿದೆ.

ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಜೂನ್‌ 11ರಂದು ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್‌–9 ರಾಕೆಟ್‌ ಅನ್ನು ಉಡಾವಣೆ ಮಾಡಬೇಕಿತ್ತು. ಆದರೆ, ರಾಕೆಟ್‌ನಲ್ಲಿ ಇಂಧನ ಸೋರುತ್ತಿದ್ದ ಕಾರಣ ಕೊನೆಯ ಕ್ಷಣದಲ್ಲಿ ಉಡಾವಣೆಯನ್ನು ರದ್ದು ಮಾಡಲಾಗಿತ್ತು.

ಮೇ 29, ಜೂನ್‌ 8 ಮತ್ತು ಜೂನ್‌ 10 ಹೀಗೆ ಹಲವು ಬಾರಿ ರಾಕೆಟ್‌ ಉಡಾವಣೆಗೆ ದಿನಾಂಕ ನಿಗದಿ ಮಾಡಿ ಆನಂತರ ಮುಂದೂಡಲಾಗಿತ್ತು. ಜೂನ್ 19ಕ್ಕೆ ಮತ್ತೆ ಸಮಯ ನಿಗದಿ ಮಾಡಲಾಗಿತ್ತು. ಇದೀಗ ಜೂನ್ 22ಕ್ಕೆ ಉಡಾವಣೆಗೆ ಸಮಯ ನಿಗದಿ ಮಾಡಲಾಗಿದೆ.

ಆಕ್ಸಿಯಂ ಮಿಷನ್‌–4 ಪಯಣಕ್ಕೆ ನಾಸಾ, ಆಕ್ಸಿಯಮ್ ಸ್ಪೇಸ್‌ ಮತ್ತು ಸ್ಪೇಸ್‌ಎಕ್ಸ್‌ ಸಂಸ್ಥೆಗಳು ಜೂನ್ 22 ದಿನಾಂಕವನ್ನು ಆಯ್ಕೆ ಮಾಡಿಕೊಂಡಿವೆ.

ಶುಕ್ಲಾ ಮಿಷನ್ ಪೈಲಟ್ ಆಗಿರುವ ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯನ್ನು ಕಮಾಂಡರ್ ಪೆಗ್ಗಿ ವಿಟ್ಸನ್ ನೇತೃತ್ವ ವಹಿಸಿದ್ದಾರೆ. ಹಂಗರಿಯ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾಮ್‌ಸ್ಕಿ ಅವರು ವಿಸ್ನಿವಿಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News