ಮಧ್ಯಂತರ ಬಜೆಟ್ 2024-25 : ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ ಯೋಜನೆ ವಿಸ್ತರಣೆ
Update: 2024-02-01 20:07 IST
ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ,ನಿರ್ಮಲಾ ಸೀತಾರಾಮನ್ | Photo : PTI
ಹೊಸದಿಲ್ಲಿ: ಆಯುಷ್ಮಾನ್ ಭಾರತ ಯೋಜನೆಯಡಿ ಆರೋಗ್ಯ ವಿಮೆ ರಕ್ಷಣೆಯನ್ನು ಎಲ್ಲ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ವಿಸ್ತರಿಸಲಾಗುವುದು ಎಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ ತನ್ನ ಬಜೆಟ್ ಭಾಷಣದಲ್ಲಿ ಪ್ರಕಟಿಸಿದರು.
ಯೋಜನೆಯಡಿ ಬಡವರು ಮತ್ತು ಕೆಳ ಮಧ್ಯಮ ಆದಾಯದ ಪ್ರತಿ ಕುಟುಂಬಕ್ಕೆ ವಾರ್ಷಿಕ ಐದು ಲಕ್ಷ ರೂ.ಗಳ ಆರೋಗ್ಯ ವಿಮೆಯನ್ನು ಒದಗಿಸಲಾಗುತ್ತಿದೆ. ಯೋಜನೆಯ ಫಲಾನುಭವಿಗಳು ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸೆಯನ್ನು ಪಡೆದುಕೊಳ್ಳಬಹುದು.
ಡಿಸೆಂಬರ್ 2023ರವರೆಗೆ ಸುಮಾರು 55 ಕೋಟಿ ಜನರು ಯೋಜನೆಯ ವ್ಯಾಪ್ತಿಗೊಳಪಟ್ಟಿದ್ದಾರೆ ಎಂದು ಸೀತಾರಾಮನ್ ತಿಳಿಸಿದರು.