CJPಯ ʼಚಲೋ ಸಂಸದ್ʼ ಹಿನ್ನೆಲೆಯಲ್ಲಿ ದಿಲ್ಲಿಯ ಹಲವೆಡೆ ಇಂಟರ್ನೆಟ್ ಸೇವೆ ಸ್ಥಗಿತ: ವರದಿ
Update: 2026-07-20 12:06 IST
Photo Credit : X
ಹೊಸದಿಲ್ಲಿ : ಕಾಕ್ರೋಚ್ ಜನತಾ ಪಾರ್ಟಿ ಹಮ್ಮಿಕೊಂಡಿರುವ ಚಲೋ ಸಂಸದ್ ಪ್ರತಿಭಟನಾ ಮೆರವಣಿಗೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಂಟ್ರಲ್ ದಿಲ್ಲಿಯ ಹಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಈ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದಾರೆ .
ದಿಲ್ಲಿ ಪೊಲೀಸರು ಈ ಮೆರವಣಿಗೆಗೆ ಅನುಮತಿ ನಿರಾಕರಿಸಿದ್ದು, ಸೆಂಟ್ರಲ್ ದಿಲ್ಲಿಯಾದ್ಯಂತ ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸುವುದು ಮತ್ತು ಗಲಭೆ ನಿಯಂತ್ರಣ ವಾಹನಗಳನ್ನು ನಿಯೋಜಿಸುವುದು ಸೇರಿದಂತೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.