×
Ad

ಐಪಿಎಲ್ ಪಂದ್ಯಾವಳಿ ಒಂದು ವಾರ ಸ್ಥಗಿತ : ಬಿಸಿಸಿಐ

Update: 2025-05-09 17:17 IST

Photo | PTI

ಹೊಸದಿಲ್ಲಿ : ಭಾರತ-ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಹಿನ್ನಲೆ ಐಪಿಎಲ್ ಪಂದ್ಯಾವಳಿಯನ್ನು ಒಂದು ವಾರ ಸ್ಥಗಿತಗೊಳಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಗುರುವಾರ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ದಿಲ್ಲಿ ನಡುವೆ ನಡೆಯುತ್ತಿದ್ದ ಐಪಿಎಲ್ ಪಂದ್ಯಾಟವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಬಿಸಿಸಿಐ ಪಂದ್ಯಾವಳಿಯನ್ನು ಸ್ಥಗಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ.

ʼಆಟಗಾರರ ಸುರಕ್ಷತೆ ನಮಗೆ ಪ್ರಮುಖ ಆದ್ಯತೆಯಾಗಿದೆ. ಆದ್ದರಿಂದ ನಾವು ಐಪಿಎಲ್ ಪಂದ್ಯಾವಳಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ. ಪಂದ್ಯ ಯಾವಾಗ ಪುನರಾರಂಭವಾಗುತ್ತದೆ ಎಂದು ನಾವು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ಸಧ್ಯ, ರಾಷ್ಟ್ರೀಯ ಹಿತಾಸಕ್ತಿ ಮುಖ್ಯವಾಗಿದೆʼ ಎಂದು ಬಿಸಿಸಿಐ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News