×
Ad

ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಜಗದೀಪ್ ಧನ್ಕರ್‌

Update: 2025-07-21 21:50 IST

ಜಗದೀಪ್ ಧನ್ಕರ್ | PTI

 ಹೊಸದಿಲ್ಲಿ, ಜು. 21: ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್‌ ಅವರು ವೈದ್ಯಕೀಯ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ.

ಧನ್ಕರ್‌ ಅವರು ರಾಜೀನಾಮೆ ಪತ್ರದಲ್ಲಿ ತಮ್ಮ ಆರೋಗ್ಯಕ್ಕೆ ಆದ್ಯತೆ ನೀಡಲು ಹಾಗೂ ವೈದ್ಯಕೀಯ ಸಲಹೆಯನ್ನು ಪಾಲಿಸಬೇಕಿರುವುದರಿಂದ ಈ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. "ಸಂವಿಧಾನದ ವಿಧಿ 67(ಎ) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ," ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ಅಧಿಕಾರಾವಧಿಯಲ್ಲಿ ಬೆಂಬಲ ನೀಡಿದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ಸಚಿವ ಸಂಪುಟ ಹಾಗೂ ಸಂಸತ್ ಸದಸ್ಯರಿಗೆ ಧನ್ಕರ್‌ ಅವರು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

"ನಮ್ಮ ಮಹಾನ್ ಪ್ರಜಾಪ್ರಭುತ್ವದಲ್ಲಿ ಉಪ ರಾಷ್ಟ್ರಪತಿಯಾಗಿ ನನಗೆ ಸಿಕ್ಕ ಅನುಭವಗಳು ಅಮೂಲ್ಯ. ಭಾರತವು ಈ ಅವಧಿಯಲ್ಲಿ ಸಾಧಿಸಿದ ಆರ್ಥಿಕ ಪ್ರಗತಿ ಮತ್ತು ಅಭಿವೃದ್ಧಿಗೆ ಸಾಕ್ಷಿಯಾಗಿರುವುದು ನನಗೆ ಹೆಮ್ಮೆಯ ಸಂಗತಿ," ಎಂದು ಅವರು ತಿಳಿಸಿದ್ದಾರೆ.

ಧನ್ಕರ್‌ ಅವರು 2022ರಲ್ಲಿ ಉಪ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News