×
Ad

ಜಮ್ಮುಕಾಶ್ಮೀರ | ರಾಜ್ಯಸಭಾ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ

Update: 2025-10-12 12:20 IST

Photo | ndtv (ಬಿಜೆಪಿ ಅಧ್ಯಕ್ಷ ಸತ್ಪಾಲ್ ಶರ್ಮ)

ಶ್ರೀನಗರ : ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಿಂದ ನಡೆಯಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರನ್ನು ರವಿವಾರ ಬಿಜೆಪಿ ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ಸತ್ಪಾಲ್ ಶರ್ಮ, ಗುಲಾಮ್ ಮುಹಮ್ಮದ್ ಮೀರ್ ಮತ್ತು ರಾಕೇಶ್ ಮಹಾಜನ್ ಅವರ ಹೆಸರನ್ನು ಬಿಜೆಪಿ ಘೋಷಿಸಿದೆ.  

ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆಗಳನ್ನು  ಹೊರಡಿಸಿದೆ. ನಾಲ್ಕು ಸ್ಥಾನಗಳ ಪೈಕಿ ಮೂರರಲ್ಲಿ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟ ಮೇಲುಗೈ ಹೊಂದಿದೆ ಎಂದು ಹೇಳಲಾಗಿದೆ.  


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News