×
Ad

ರಷ್ಯಾ ತೈಲ ಆಮದು ವಿವಾದ | "ನಿಮ್ಮ ಕೆಲಸ ನೀವು ನೋಡಿಕೊಳ್ಳಿ": ಟ್ರಂಪ್ ಗೆ ಕಮಲ್ ಹಾಸನ್ ತಿರುಗೇಟು

"ಭಾರತ ಸಾರ್ವಭೌಮ ರಾಷ್ಟ್ರ, ಅದು ವಿದೇಶಗಳಿಂದ ನಿರ್ದೇಶನಗಳನ್ನು ತೆಗೆದುಕೊಳ್ಳುವುದಿಲ್ಲ"

Update: 2026-03-08 13:58 IST

ಕಮಲ್ ಹಾಸನ್ (Photo: PTI)

ಹೊಸದಿಲ್ಲಿ: ಭಾರತವು ರಷ್ಯಾದಿಂದ ತೈಲು ಆಮದು ಮಾಡಿಕೊಳ್ಳಲು ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ತಿರುಗೇಟು ನೀಡಿರುವ ನಟ, ರಾಜಕಾರಣಿ ಕಮಲ್ ಹಾಸನ್, ಭಾರತ ಸಾರ್ವಭೌಮ ರಾಷ್ಟ್ರವಾಗಿದ್ದು, ಅದು ವಿದೇಶಗಳಿಂದ ನಿರ್ದೇಶನಗಳನ್ನು ತೆಗೆದುಕೊಳ್ಳುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಎಕ್ಸ್ ನಲ್ಲಿ ಬಹಿರಂಗ ಪತ್ರವನ್ನು ಹಂಚಿಕೊಂಡಿರುವ ಕಮಲ್ ಹಾಸನ್, ಭಾರತದ ನೀತಿ ನಿರ್ಧಾರಗಳಲ್ಲಿನ ಸ್ವಾತಂತ್ರ್ಯವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೌರವಿಸಬೇಕು ಎಂದು ತಾಕೀತು ಮಾಡಿದ್ದಾರೆ. ಸದ್ಯ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿರುವುದರಿಂದ, ರಷ್ಯಾದಿಂದ ತೈಲ ಖರೀದಿಸುವುದನ್ನು ಮುಂದುವರಿಸಲು ಭಾರತಕ್ಕೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಲಾಗಿದೆ ಎಂದು ಅಮೆರಿಕ ಪ್ರಕಟಿಸಿದ ಬೆನ್ನಿಗೇ ಅವರಿಂದ ಈ ಹೇಳಿಕೆ ಹೊರ ಬಿದ್ದಿದೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನುದ್ದೇಶಿಸಿ ಬಹಿರಂಗ ಪತ್ರ ಬರೆದಿರುವ ಮಕ್ಕಳ್ ನೀದಿ ಮಯ್ಯಮ್ ಪಕ್ಷದ ಸಂಸ್ಥಾಪಕರೂ ಆದ ಕಮಲ್ ಹಾಸನ್, ವಿದೇಶಾಂಗ ನೀತಿ ವಿಚಾರಗಳಲ್ಲಿ ಭಾರತದ ಸಾರ್ವಭೌಮತೆ ಮತ್ತು ಸ್ವಾತಂತ್ರ್ಯವನ್ನು ಬಲವಾಗಿ ಪ್ರತಿಪಾದಿಸಿದ್ದಾರೆ.

“ಭಾರತಕ್ಕೆ ಸೇರಿದ ಜನರಾದ ನಾವು ಸ್ವತಂತ್ರ ಮತ್ತು ಸಾರ್ವಭೌಮ ದೇಶವಾಗಿದ್ದೇವೆ. ನಾವು ದೂರದ ವಿದೇಶಿ ತೀರಗಳಿಂದ ಇನ್ನೆಂದೂ ಆದೇಶಗಳನ್ನು ಸ್ವೀಕರಿಸುವುದಿಲ್ಲ. ನಿಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ದಯವಿಟ್ಟು ನೀವು ನಿಮ್ಮ ಕೆಲಸವನ್ನು ನೋಡಿಕೊಳ್ಳಿ” ಎಂದು ಅವರು ತೀಕ್ಷ್ಣವಾಗಿ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News