×
Ad

ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರಿಗೆ ಶ್ರೀ ನಾರಾಯಣ ಗುರು ಸಾಹೋದರ್ಯ ಪ್ರಶಸ್ತಿ

Update: 2025-08-21 23:38 IST

ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ 

ತ್ರಿಶೂರ್: ಸ್ವಾಮಿ ಶಾಶ್ವತಾನಂದ ಸಾಂಸ್ಕೃತಿಕ ಕೇಂದ್ರವು ಭಾರತದ ಗ್ರಾಂಡ್ ಮುಫ್ತಿ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರನ್ನು ಮೊದಲ “ಶ್ರೀ ನಾರಾಯಣ ಗುರು ಸಾಹೋದರ್ಯ ಪ್ರಶಸ್ತಿ”ಗೆ ಆಯ್ಕೆ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಕಳೆದ ಏಳು ದಶಕಗಳಿಂದ ಕೇರಳದ ಸಾಮಾಜಿಕ-ಸಾಂಸ್ಕೃತಿಕ ವಲಯದಲ್ಲಿ ಎ.ಪಿ ಉಸ್ತಾದ್ ಅವರು ಪ್ರಮುಖ ಪಾತ್ರವಹಿಸಿದ್ದು, ಸೌಹಾರ್ದತೆ, ಸಹಿಷ್ಣುತೆ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬೆಳೆಸುವಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಪ್ರಶಸ್ತಿಯ ಆಯ್ಕೆ ಸಮಿತಿ ತಿಳಿಸಿದೆ.

ಈ ಪ್ರಶಸ್ತಿಯು 1 ಲಕ್ಷ ರೂ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News