ಸಿಕ್ಕಿಂನಲ್ಲಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಈಡಿ ವಶಕ್ಕೆ
Photo Credit: thehindu
ಗ್ಯಾಂಗ್ಟಕ್: ಆನ್ಲೈನ್ ಗೇಮಿಂಗ್ ಹಾಗೂ ಬೆಟ್ಟಿಂಗ್ ಕಾರ್ಯಾಚರಣೆಗೆ ನಂಟು ಹೊಂದಿದ ಹಣ ಅಕ್ರಮ ವರ್ಗಾವಣೆ ದಂಧೆಗೆ ಸಂಬಂಧಿಸಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿಯನ್ನು ಜಾರಿ ನಿರ್ದೇಶನಾಲಯ (ಈ.ಡಿ.) ಸಿಕ್ಕಿಂನ ಗ್ಯಾಂಗ್ಟಕ್ ನ ಹೊಟೇಲ್ ನಿಂದ ಗುರುವಾರ ರಾತ್ರಿ ವಶಕ್ಕೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ.
ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯದ ವಿಶೇಷ ತಂಡ ಪತ್ತೆ ಹಚ್ಚಿದೆ ಹಾಗೂ ಹಣ ಅಕ್ರಮ ವರ್ಗಾವಣೆ ಕಾಯ್ದೆ (ಪಿಎಂಎಲ್ಎ)ಯ ನಿಯಮಗಳ ಅಡಿಯಲ್ಲಿ ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಕೆ.ಸಿ.ವಿರೇಂದ್ರ ಪಪ್ಪಿಯವರ ಮನೆ ಮತ್ತು ಅವರ ಸಹೋದರರ ನಿವಾಸಗಳ ಮೇಲೆ ಇಂದು ಬೆಳ್ಳಂಬೆಳ್ಳಿಗೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಳ್ಳಕೆರೆಯ ಹಳೇ ಟೌನ್ ವೀರಭದ್ರಸ್ವಾಮಿ ದೇವಾಲಯದ ಸಮೀಪದಲ್ಲಿರುವ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಮತ್ತು ಅವರ ಅಣ್ಣ ಕೆ.ಸಿ.ನಾಗರಾಜ್, ಕೆ.ಸಿ.ತಿಪ್ಪೇಸ್ವಾಮಿ ಇವರ ಮನೆಗಳ ಮೇಲೆ ದಾಳಿ ನಡೆಸಿರುವ ಜಾರಿ ನಿರ್ದೇಶನಾಲಯದ (ಈಡಿ) ಅಧಿಕಾರಿಗಳು ದಾಖಲೆಗಳನ್ನು ಶೋಧನೆ ನಡೆಸಿದ್ದಾರೆ.