×
Ad

2017ರ ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ಖುಲಾಸೆ

Update: 2025-12-08 11:29 IST

PC | X

ಕೊಚ್ಚಿ: 2017ರಲ್ಲಿ ಮಲಯಾಳಂ ನಟಿಯೊಬ್ಬರ ಮೇಲೆ ನಡೆದಿದೆ ಎಂದು ಆರೋಪಿಸಿದ್ದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣದಲ್ಲಿ ನಟ ದಿಲೀಪ್ ಅವರಿಗೆ ಕೇರಳ ನ್ಯಾಯಾಲಯ ಸೋಮವಾರ ಖುಲಾಸೆ ನೀಡಿದೆ. ಸುಮಾರು 8 ವರ್ಷಗಳ ಕಾಲ ವಿಚಾರಣೆ ನಡೆದ ಈ ಪ್ರಕರಣದಲ್ಲಿ ದಿಲೀಪ್ ವಿರುದ್ಧ ಹೊರಡಿಸಿದ್ದ ಪಿತೂರಿ ಮತ್ತು ಸಾಕ್ಷ್ಯ ನಾಶಕ್ಕೆ ಸಹಾಯ ಮಾಡಿದ ಆರೋಪಗಳನ್ನು ನ್ಯಾಯಾಲಯ ತಳ್ಳಿಹಾಕಿದೆ.

ಎರ್ನಾಕುಲಂ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶ ಹನಿ ಎಂ. ವರ್ಗೀಸ್ ಅವರು ಬೆಳಿಗ್ಗೆ 11 ಗಂಟೆಗೆ ತೀರ್ಪು ಪ್ರಕಟಿಸಿದರು. ದಿಲೀಪ್ ವಿರುದ್ಧ ಪ್ರಾಸಿಕ್ಯೂಷನ್‌ ಸಲ್ಲಿಸಿದ್ದ ಸಾಕ್ಷ್ಯಗಳು ಆರೋಪಗಳನ್ನು ಸಮರ್ಥಿಸುವಂತಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

2017ರ ಫೆಬ್ರವರಿ 17ರಂದು ಕೊಚ್ಚಿಯಲ್ಲಿ ಪ್ರಮುಖ ನಟಿಯೊಬ್ಬರನ್ನು ಅಪಹರಿಸಿ, ಅವರ ಕಾರಿನೊಳಗೆ ಸುಮಾರು 2 ಗಂಟೆಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಘಟನೆ ದಕ್ಷಿಣ ಭಾರತದ ಸಿನಿಮಾರಂಗವನ್ನು ನಡುಗಿಸಿತ್ತು.

ಈ ಪ್ರಕರಣದಲ್ಲಿ ಪಲ್ಸರ್ ಸುನಿ, ಮಾರ್ಟಿನ್ ಆಂಟೋನಿ, ಮಣಿಕಂಡನ್ ಬಿ., ವಿಜೇಶ್ ವಿಪಿ., ಸಲೀಂ ಎಚ್., ಪ್ರದೀಪ್, ಚಾರ್ಲಿ ಥಾಮಸ್, ಸನಿಲ್ ಕುಮಾರ್ ಅಲಿಯಾಸ್ ‘ಮೇಷ್ಟ್ರಿ ಸನಿಲ್’ ಮತ್ತು ಶರತ್ ಸೇರಿದಂತೆ ಒಟ್ಟು 10 ಮಂದಿ ಆರೋಪಿಗಳು ವಿಚಾರಣೆಯನ್ನು ಎದುರಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News