ಕೇರಳ | ಎಸ್ಐಆರ್ ಮುಂದೂಡುವಂತೆ ಮನವಿ ಮಾಡಿದ ಚುನಾವಣಾ ಆಯೋಗದ ಅಧಿಕಾರಿಗಳು
ಸಾಂದರ್ಭಿಕ ಚಿತ್ರ | PTI
ತಿರುವನಂತಪುರಂ : ಸ್ಥಳೀಯ ಸಂಸ್ಥೆಗಳ ಚುನಾವಣೆ ಬರುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತಾವಿತ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನವನ್ನು ಪ್ರಾರಂಭಿಸಲು ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಕೇರಳ ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಮಾಡಬೇಕಿರುವ ಕಂದಾಯ ಅಧಿಕಾರಿಗಳು ನವೆಂಬರ್‌ಗೂ ಮುಂಚೆ ನಡೆಯಬೇಕಿರುವ ಸ್ಥಳೀಯ ಸಂಸ್ಥೆಗಳ ಚುನಾವಣಾ ಸಿದ್ಧತೆಯಲ್ಲಿ ತೊಡಗಿಸಿಕೊಂಡಿರುವುದರಿಂದ, ಸ್ಥಳೀಯ ಸಂಸ್ಥೆಗಳ ಚುನಾವಣೆಗೂ ಮುನ್ನ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡುವುದು ಕ್ಲಿಷ್ಟಕರವಾಗಲಿದೆ ಎಂದು ಕೇರಳ ಮುಖ್ಯ ಚುನಾವಣಾಧಿಕಾರಿ ರತನ್ ಯು.ಕೇಳ್ಕರ್ ಅವರು ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಹೀಗಾಗಿ, ಕೇರಳದಲ್ಲಿನ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯನ್ನು ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯವಾಗುವವರೆಗ ತಡೆ ಹಿಡಿಯಬೇಕು ಎಂದು ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.