×
Ad

ಕೋಲ್ಕತ್ತ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂಜಯ್ ರಾಯ್ ತಪ್ಪಿತಸ್ಥ: ಸ್ಥಳೀಯ ನ್ಯಾಯಾಲಯ ತೀರ್ಪು

Update: 2025-01-18 15:54 IST

ಆರೋಪಿ ಸಂಜಯ್ ರಾಯ್ 

ಕೋಲ್ಕತ್ತ: ಆರ್‌ಜಿ ಕಾರ್ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂಜಯ್ ರಾಯ್ ತಪ್ಪಿತಸ್ಥ ಎಂದು ಕೋಲ್ಕತ್ತಾದ ಸ್ಥಳೀಯ ನ್ಯಾಯಾಲಯವು ತೀರ್ಪು ನೀಡಿದೆ.

33 ವರ್ಷದ ಮಾಜಿ ನಾಗರಿಕ ಪೊಲೀಸ್ ಸ್ವಯಂಸೇವಕ ಸಂಜಯ್ ರಾಯ್, ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯೊಬ್ಬರ ಮೇಲೆ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೋಮವಾರ ಶಿಕ್ಷೆ ಪ್ರಕಟವಾಗಲಿದೆ. ಆ ಮೂಲಕ ಕಳೆದ ವರ್ಷ ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ್ದ ಕ್ರೂರ ಘಟನೆಗೆ ಅಂತ್ಯ ಹಾಡಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News