×
Ad

ಕೋಟಾ | ಜೆಇಇ ಆಕಾಂಕ್ಷಿ ನಿಗೂಢ ಸಾವು

Update: 2024-11-04 22:43 IST

ಸಾಂದರ್ಭಿಕ ಚಿತ್ರ | PC : X 

ಕೋಟಾ : ಜೆಇಇಗೆ ಸಿದ್ದತೆ ನಡೆಸುತ್ತಿದ್ದ 18 ವರ್ಷದ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದ ತಲ್ವಾಂಡಿಯಲ್ಲಿ ರವಿವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ವಿದ್ಯಾರ್ಥಿಯನ್ನು ಬಿಹಾರದ ಪಾಟ್ನಾ ಮೂಲದ ಹರ್ಷ ರಂಜನ್ ಎಂದು ಗುರುತಿಸಲಾಗಿದೆ. ಈತ ಖಾಸಗಿ ತರಬೇತಿ ಕೇಂದ್ರದಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸುವ ಉದ್ದೇಶದಿಂದ ತಲ್ವಾಂಡಿ ಪ್ರದೇಶದಲ್ಲಿರುವ ಪೇಯಿಂಗ್ ಗೆಸ್ಟ್ ನಲ್ಲಿ ತನ್ನ ತಾಯಿಯೊಂದಿಗೆ ವಾಸಿಸುತ್ತಿದ್ದ ಎಂದು ಅವರು ಸೋಮವಾರ ತಿಳಿಸಿದ್ದಾರೆ.

ರವಿವಾರ ಮಧ್ಯಾಹ್ನ ಊಟ ಮಾಡಿದ ಬಳಿಕ ಹರ್ಷ ರಂಜನ್ ಅಸ್ವಸ್ಥನಾದ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆಯ ವೇಳೆ ಆತ ಮೃತಪಟ್ಟ ಎಂದು ಅವರು ತಿಳಿಸಿದ್ದಾರೆ.

ಆತ ರವಿವಾರ ಮಧ್ಯಾಹ್ನ ಊಟ ಸೇವಿಸಿ ನಿದ್ರೆ ಮಾಡಿದ್ದ. ಸಂಜೆ ಆತನ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿತು. ಆತನ ಬಾಯಿಯಿಂದ ನೊರೆ ಬರಲು ಆರಂಭವಾಯಿತು. ತಾಯಿ ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ, ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು ಎಂದು ಪೊಲೀಸ್ ಉಪ ಅಧೀಕ್ಷಕ ಯೋಗೇಶ್ ಶರ್ಮಾ ತಿಳಿಸಿದ್ದಾರೆ.

ಸುಸೈಡ್ ನೋಟ್ ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಹಾಗೂ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News