×
Ad

ಲಡಾಖ್ ಹಿಂಸಾಚಾರ : ಕಾಂಗ್ರೆಸ್ ನಾಯಕನ ವಿರುದ್ಧ ಪ್ರಕರಣ ದಾಖಲು

ನಿರುದ್ಯೋಗ ಹೆಚ್ಚಳ ಹಿಂಸಾಚಾರಕ್ಕೆ ಕಾರಣ ಎಂದ ಸೋನಮ್ ವಾಂಗ್ಚುಕ್

Update: 2025-09-25 10:37 IST
Photo |NDTV

ಲೇಹ್ : ಲಡಾಖ್‌ನ ಲೇಹ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಮತ್ತು ಸ್ಥಳೀಯ ಕೌನ್ಸಿಲರ್ ತ್ಸೆಪಾಗ್ ವಿರುದ್ಧ ಪ್ರಕರಣ ದಾಖಲಾಗಿದೆ.  

ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಮತ್ತು ಅವರ ಪ್ರಚೋದನಕಾರಿ ಭಾಷಣಗಳೇ ಹಿಂಸಾತ್ಮಕ ಪ್ರತಿಭಟನೆಗೆ ಕಾರಣ ಎಂದು ಸರಕಾರ ಆರೋಪಿಸಿತ್ತು.

ಆದರೆ, ನಿರುದ್ಯೋಗ ಮತ್ತು 2020ರಲ್ಲಿ ನೀಡಿದ್ದ ಭರವಸೆಗಳನ್ನು ಬಿಜೆಪಿ ಈಡೇರಿಸದೆ ಇರುವುದು ಲಡಾಖ್‌ನಲ್ಲಿ ಹಿಂಸಾಚಾರಕ್ಕೆ ಕಾರಣ. ಇದು ನನ್ನ ಜೀವನದ ಅತ್ಯಂತ ದುಃಖಕರ ದಿನಗಳಲ್ಲಿ ಒಂದು ಎಂದು ಸೋನಮ್ ವಾಂಗ್ಚುಕ್ ಹೇಳಿದ್ದಾರೆ.

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ನಡೆದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಕನಿಷ್ಠ ನಾಲ್ವರು ಪ್ರತಿಭಟನಾಕಾರರು ಮೃತಪಟ್ಟಿದ್ದು, 90 ಜನರು ಗಾಯಗೊಂಡಿದ್ದಾರೆ. ಹಿಂಸಾಚಾರದ ನಂತರ ಲೇಹ್ ಜಿಲ್ಲೆಯಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರ ಜೊತೆಗೆ ಇಂಡೋ-ಟಿಬೆಟಿಯನ್ ಗಡಿಯಲ್ಲಿನ ಪೊಲೀಸರನ್ನು ಕೂಡ ನಿಯೋಜಿಸಲಾಗಿದೆ.

ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್ ಕವಿಂದರ್ ಗುಪ್ತಾ ಅವರು ಪ್ರತಿಭಟನೆಯ ವೇಳೆ ನಡೆದ ಘರ್ಷಣೆಯನ್ನು ಒಂದು ಪಿತೂರಿ ಎಂದು ಕರೆದಿದ್ದು, ಹಿಂಸಾಚಾರದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News