×
Ad

ಪಾಟ್ನಾದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆಯ ವೇಳೆ ಪೊಲೀಸರಿಂದ ಲಾಠಿ ಚಾರ್ಜ್ | ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಬಿ ವಿ ಶ್ರೀನಿವಾಸ್ ಸೇರಿದಂತೆ ಹಲವರಿಗೆ ಗಾಯ

Update: 2024-07-24 20:05 IST

PC : PTI

ಪಾಟ್ನಾ : ಬಿಹಾರದ ಪಾಟ್ನಾದ ವಿಧಾನ ಪರಿಷತ್ತಿನ ಹೊರಗೆ ಯುವ ಕಾಂಗ್ರೆಸ್‌ನ ಬಿಹಾರ ಘಟಕ ಆಯೋಜಿಸಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಪ್ರತಿಭಟನಾಕಾರರ ಮೇಲೆ ಜಲಫಿರಂಗಿಗಳನ್ನು ಪ್ರಯೋಗಿಸಿ, ಲಾಠಿ ಚಾರ್ಜ್ ಮಾಡಿದ್ದರಿಂದ ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಬಿ ವಿ ಶ್ರೀನಿವಾಸ್ ಸೇರಿದಂತೆ ಹಲವರು ಗಾಯಗೊಂಡ ಘಟನೆ ಬುಧವಾರ ವರದಿಯಾಗಿದೆ.

ರಾಜ್ಯದಲ್ಲಿ ಬೆಲೆಯೇರಿಕೆ, ಹೆಚ್ಚುತ್ತಿರವ ಅಪರಾಧ ಪ್ರಕರಣಗಳು, ನಿರುದ್ಯೋಗ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಿಎಂ ನಿತೀಶ್ ಕುಮಾರ್ ಕ್ರಮಕ್ಕೆ ಒತ್ತಾಯಿಸಿ ಯುವ ಕಾಂಗ್ರೆಸ್ ಪ್ರತಿಭಟನೆ ಆಯೋಜಿಸಿತ್ತು. ಪ್ರತಿಭಟನೆಗ ಅನುಮತಿ ನಿರಾಕರಿಸಿದ್ದರೂ, ಪ್ರತಿಭಟನೆ ಆಯೋಜಿಸಲಾಗಿತ್ತು ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಮುರಿದು ಮುನ್ನುಗ್ಗಿದಾಗ ಪೊಲೀಸ್ ಸಿಬ್ಬಂದಿ ಲಾಠಿ ಚಾರ್ಜ್ ಮಾಡಿ, ಜಲಫಿರಂಗಿ ಬಳಸಿದರು ಎನ್ನಲಾಗಿದೆ. ಘರ್ಷಣೆಯಲ್ಲಿ ಪ್ರತಿಭಟನಾ ಕಾರರು ಸೇರಿದಂತೆ, ಹಲವಾರು ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News