ಕೇವಲ ಪ್ರತಿಭಟನೆ ಕಾರಣಕ್ಕೆ ಲಾಠಿಚಾರ್ಜ್ ಸಲ್ಲದು : ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

"ಶಾಂತಿಯುತ, ಕಾನೂನುಬದ್ಧ ಪ್ರತಿಭಟನೆಯ ಹಕ್ಕನ್ನು ಸಂವಿಧಾನ ನೀಡಿದೆ"

Update: 2026-07-27 11:34 IST

Photo credit: PTI

ಹೊಸದಿಲ್ಲಿ: ಕೇವಲ ಪ್ರತಿಭಟನೆ ಮಾಡಿದ ಕಾರಣಕ್ಕೆ ಲಾಠಿಚಾರ್ಜ್ ಮಾಡುವುದು ಸಮರ್ಥನೀಯವಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ಸಂಸತ್ ಚಲೋ ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಬಲಪ್ರಯೋಗ ನಡೆಸಿದ್ದಾರೆ ಎಂಬ ಬಗ್ಗೆ ಚರ್ಚೆಯ ನಡುವೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಪೊಲೀಸ್ ಬಲವನ್ನು ಬಳಸಲಾಗಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಲಾದ ಅರ್ಜಿಗಳ ಬಗ್ಗೆ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್‌ ಈ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.

ಶಾಂತಿಯುತ ಮತ್ತು ಕಾನೂನುಬದ್ಧ ಪ್ರತಿಭಟನೆಯ ಹಕ್ಕನ್ನು ಸಂವಿಧಾನ ನೀಡಿದೆ. ಕೇವಲ ಪ್ರತಿಭಟನೆ ನಡೆಸಲಾಗಿದೆ ಎಂಬ ಕಾರಣಕ್ಕೆ ಲಾಠಿಚಾರ್ಜ್ ಸಮರ್ಥನೀಯವಲ್ಲ ಎಂದು ಸಿಜೆಐ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ ಮೋಹನ ಅವರಿದ್ದ ಪೀಠವು ಹೇಳಿದೆ.

ಪೊಲೀಸರ ಬಲವಂತದ ಕ್ರಮಗಳ ಕುರಿತ ಆರೋಪಗಳ ಬಗ್ಗೆ ಸ್ವತಂತ್ರವಾಗಿ ಪರಿಶೀಲಿಸಬೇಕು ಎಂದು ಕೋರ್ಟ್ ಅಭಿಪ್ರಾಯಪಟ್ಟಿದ್ದು, ದೇಶಾದ್ಯಂತ ಪ್ರತಿಭಟನೆಗಳನ್ನು ನಿರ್ವಹಿಸಲು ಪೊಲೀಸರಿಗೆ ಏಕರೂಪದ ಮಾರ್ಗಸೂಚಿಗಳ ಅಗತ್ಯವಿದೆ ಎಂದು ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News