ಲೋಕಸಭಾ ಚುನಾವಣೆ: ವಯನಾಡ್ ನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ
Update: 2024-04-03 14:00 IST
ರಾಹುಲ್ ಗಾಂಧಿ , ಪ್ರಿಯಾಂಕಾ ಗಾಂಧಿ | Photo ; PTI
ತಿರುವನಂತಪುರಂ: ಬುಧವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ತಮ್ಮ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಯ ವೇಳೆ ಬೃಹತ್ ರೋಡ್ ಶೋ ನಡೆಸಿದ ರಾಹುಲ್ ಗಾಂಧಿ, ಭಾರಿ ಸಂಖ್ಯೆಯ ಜನಸ್ತೋಮ, ಬೆಂಬಲಿಗರು ಹಾಗೂ ಪಕ್ಷದ ಕಾರ್ಯಕರ್ತರನ್ನು ಸೆಳೆದರು.
ನಾಮಪತ್ರ ಸಲ್ಲಿಕೆಯ ವೇಳೆ ರಾಹುಲ್ ಗಾಂಧಿಯೊಂದಿಗೆ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ದೀಪಾ ದಾಸ್ ಮುನ್ಷಿ, ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ.ಎಂ.ಹಸನ್ ಉಪಸ್ಥಿತರಿದ್ದರು.
2019ರ ಲೋಕಸಭಾ ಚುನಾವಣೆಯಲ್ಲಿ ವಯನಾಡ್ ನಿಂದ ಸ್ಪರ್ಧಿಸಿದ್ದ ರಾಹುಲ್ ಗಾಂಧಿ, ನಾಲ್ಕು ಲಕ್ಷಕ್ಕೂ ಹೆಚ್ಚು ಮತಗಳಿಂದ ವಿಜಯಿಯಾಗಿದ್ದರು.