×
Ad

ಅಬ್ದುಲ್‌ ನಾಸಿರ್‌ ಮಅದನಿ ಜಾಮೀನು ಷರತ್ತಿನಲ್ಲಿ ಸಡಿಲಿಕೆ; ಕೇರಳಕ್ಕೆ ತೆರಳಲು ಅವಕಾಶ

Update: 2023-07-17 14:29 IST

ನಾಸಿರ್‌ ಮಅದನಿ (PTI)

ಹೊಸದಿಲ್ಲಿ: ಬೆಂಗಳೂರು ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷ ಅಬ್ದುಲ್ ನಾಸಿರ್‌ ಮಅದನಿ ಅವರಿಗೆ ಚಿಕಿತ್ಸೆಗಾಗಿ ಕೇರಳಕ್ಕೆ ತೆರಳಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ.

ಪೊಲೀಸರ ಬೆಂಗಾವಲು ಇಲ್ಲದೆ ಕೇರಳಕ್ಕೆ ತೆರಳಲು ಮಅದನಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ವಿಚಾರಣೆ ಮುಗಿಯುವವರೆಗೆ ಬೆಂಗಳೂರಿನಲ್ಲಿಯೇ ಇರಬೇಕೆಂಬ ಷರತ್ತು ಕೂಡ ರದ್ದಾಗಿದೆ.

ನಾಸಿರ್‌ ಮಅದನಿ ಅವರು ಕೊಲ್ಲಂ ಜಿಲ್ಲೆಯಲ್ಲಿಯೇ ಇರುವಂತೆ ಕೋರ್ಟ್ ಆರಂಭದಲ್ಲಿ ಸೂಚಿಸಿದ್ದರೂ ವಕೀಲರ ಮನವಿ ಮೇರೆಗೆ ಚಿಕಿತ್ಸೆಗಾಗಿ ಜಿಲ್ಲೆ ತೊರೆಯಲು ಅವಕಾಶ ನೀಡಲಾಗಿದೆ. ಪ್ರಯಾಣಕ್ಕೆ ಕೊಲ್ಲಂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಅನುಮತಿ ಪಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಮಅದನಿ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಮಅದನಿಯ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು, ಉತ್ತಮ ಚಿಕಿತ್ಸೆ ಅಗತ್ಯವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಬೆಂಗಳೂರು ಸ್ಫೋಟ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿ ಇನ್ನು ಮುಂದೆ ಮದನಿ ಹಾಜರಿ ಅಗತ್ಯವಿಲ್ಲ ಎಂಬುದನ್ನು ಮನಗಂಡ ಸುಪ್ರೀಂ ಕೋರ್ಟ್ ಮಅದನಿಗೆ ಕೇರಳದಲ್ಲಿಯೇ ಇರುವಂತೆ ಸೂಚಿಸಿದೆ. ಆದರೆ ಅಗತ್ಯವಿದ್ದರೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವಂತೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News