ನಿಧಿ ತಿವಾರಿ | Photo Credit : X

ಭೋಪಾಲ್‌: ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಒಟ್ಟು 16 ಲಕ್ಷಕ್ಕೂ ಅಧಿಕ ಫಾಲೋವರ್‌ಗಳನ್ನು ಹೊಂದಿದ್ದ ಪ್ರಸಿದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಧಿ ತಿವಾರಿ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಂಧ್ಯ ಪ್ರದೇಶದ ಪ್ರಮುಖ ಇನ್‌ಪ್ಲುಯೆನ್ಸರ್‌ಗಳಲ್ಲಿ ಓರ್ವರಾಗಿದ್ದ ನಿಧಿ 2024ರಲ್ಲಿ ‘ಮಿಸ್ ಪ್ರಿಟಿ ಇಂಡಿಯಾ’ ಪ್ರಶಸ್ತಿ ಪಡೆದಿದ್ದು, ಮಾಡೆಲಿಂಗ್ ಹಾಗೂ ನಟನೆಯಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಯತ್ನಿಸುತ್ತಿದ್ದರು.

ಶನಿವಾರ ಸಂಜೆ ಭುಸಾಮೋಡ್‌ನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ನಿಧಿ ಪತ್ತೆಯಾಗಿದ್ದರು. ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು.

ನಿಧಿ ಸಾವಿಗೆ ಮೊದಲು ಯಾರೊಂದಿಗೋ ಫೋನ್‌ನಲ್ಲಿ ಮಾತನಾಡುತ್ತಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮೋರ್ವಾ ಪೊಲೀಸ್ ಠಾಣೆಯ ಉಸ್ತುವಾರಿ ಡಾ. ಜ್ಞಾನೇಂದ್ರ ಸಿಂಗ್, ಮೃತರ ಕಾಲ್ ರೆಕಾರ್ಡ್‌ಗಳು, ಡಿಜಿಟಲ್ ಚಟುವಟಿಕೆಗಳು ಹಾಗೂ ಇತರ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ತನಿಖೆ ಮುಗಿಯುವವರೆಗೆ ಯಾವುದೇ ನಿರ್ಧಾರಕ್ಕೆ ಬರುವುದರ ವಿರುದ್ಧ ಪೊಲೀಸರು ಎಚ್ಚರಿಸಿದ್ದಾರೆ.

ನಿಧಿಯ ಅಕಾಲಿಕ ನಿಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor