ಕರೂರ್ ಕಾಲ್ತುಳಿತ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್
Update: 2025-10-03 14:52 IST
Credit: Reuters Photo
ಚೆನ್ನೈ: ಸೆಪ್ಟೆಂಬರ್ 27ರಂದು ನಟ, ರಾಜಕಾರಣಿ ವಿಜಯ್ ಅವರ ಚುನಾವಣಾ ರ‍್ಯಾಲಿ ವೇಳೆ ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಬಿಜೆಪಿ ನಾಯಕಿ ಉಮಾ ಆನಂದನ್ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಮದ್ರಾಸ್ ಹೈಕೋರ್ಟ್ ವಜಾಗೊಳಿಸಿದೆ.
ಈ ಘಟನೆಯಲ್ಲಿ 41 ಮಂದಿ ಮೃತಪಟ್ಟು, ಹಲವಾರು ಮಂದಿ ಗಾಯಗೊಂಡಿದ್ದರು. ಈ ದುರ್ಘಟನೆಯಲ್ಲಿ ಸರಕಾರದ ನಿರಾಸಕ್ತಿ ಸೇರಿದಂತೆ ಹಲವಾರು ಪ್ರಶ್ನೆಗಳನ್ನು ಮುಂದಿಟ್ಟು ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
ಆದರೆ ಅರ್ಜಿಯನ್ನು ವಜಾಗೊಳಿಸಿದ ವಿಭಾಗೀಯ ನ್ಯಾಯಪೀಠ, ಕಾನೂನು ವ್ಯಾಪ್ತಿ ಹೊಂದಿರುವ ಮಧುರೈ ಪೀಠದ ಎದುರು ಅರ್ಜಿ ಸಲ್ಲಿಸುವಂತೆ ಅವರಿಗೆ ಸೂಚಿಸಿದೆ.