×
Ad

ಏಕನಾಥ್ ಶಿಂದೆ ಕುರಿತ ಹೇಳಿಕೆ ವಿವಾದ | ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು

Update: 2025-03-28 17:37 IST

ಕಾಮಿಡಿಯನ್ ಕುನಾಲ್ ಕಾಮ್ರಾ Photo | hindustantimes

ಹೊಸದಿಲ್ಲಿ : ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂದೆ ಕುರಿತ ಹೇಳಿಕೆಗೆ ಸಂಬಂಧಿಸಿ ದಾಖಲಾದ ಪ್ರಕರಣದಲ್ಲಿ ಕಾಮಿಡಿಯನ್ ಕುನಾಲ್ ಕಾಮ್ರಾಗೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.  

ಶಿವಸೇನಾ ಶಾಸಕ ಮುರ್ಜಿ ಪಟೇಲ್ ಅವರು ನೀಡಿದ ದೂರಿನ ಮೇರೆಗೆ ಮುಂಬೈನ ಉಪನಗರ ಖಾರ್ ಪೊಲೀಸ್ ಠಾಣೆಯಲ್ಲಿ ಕುನಾಲ್ ಕಾಮ್ರಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಕುನಾಲ್ ಕಾಮ್ರಾಗೆ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್‌ ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News