Maharashtra | ನಾಸಿಕ್ ನಲ್ಲಿ 3.8 ತೀವ್ರತೆಯ ಭೂಕಂಪ

Update: 2026-07-30 07:10 IST

ಸಾಂದರ್ಭಿಕ ಚಿತ್ರ | newindianexpress

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಗುರುವಾರ ಮುಂಜಾನೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಗುರುವಾರ ಮುಂಜಾನೆ 2:37:41ರ ಸುಮಾರಿಗೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿತ್ತು ಎಂದು ಎನ್‌ಸಿಎಸ್ ಮಾಹಿತಿ ನೀಡಿದೆ.

ಭೂಕಂಪದ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಎನ್‌ಸಿಎಸ್, “30/07/2026ರಂದು ಭಾರತೀಯ ಕಾಲಮಾನ ಮುಂಜಾನೆ 2:37:41ಕ್ಕೆ ಮಹಾರಾಷ್ಟ್ರದ ನಾಸಿಕ್‌ನಲ್ಲಿ 3.8 ತೀವ್ರತೆಯ ಭೂಕಂಪ ದಾಖಲಾಗಿದೆ. ಇದರ ಕೇಂದ್ರಬಿಂದು ಭೂಮಿಯಿಂದ 5 ಕಿಲೋಮೀಟರ್ ಆಳದಲ್ಲಿತ್ತು” ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News