×
Ad

ಮಹಾರಾಷ್ಟ್ರ ಭೂಕುಸಿತ: ಮೃತರ ಸಂಖ್ಯೆ 18ಕ್ಕೇರಿಕೆ

Update: 2023-07-21 22:59 IST

Photo: PTI 

ಮುಂಬೈ: ಎನ್‌ಡಿಆರ್‌ಎಫ್ ಶೋಧ ಮತ್ತು ರಕ್ಷಣಾ ತಂಡಗಳು ಭೂಕುಸಿತ ಸಂಭವಿಸಿದ್ದ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಇರ್ಷಲವಾಡಿ ಗ್ರಾಮದಲ್ಲಿ ಶುಕ್ರವಾರ ಅವಶೇಷಗಳಡಿಯಿಂದ ಇನ್ನೂ ಎರಡು ಶವಗಳನ್ನು ಹೊರಕ್ಕೆ ತೆಗೆದಿದ್ದು, ಇದರೊಂದಿಗೆ ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೇರಿದೆ.

ಮೃತರಿಬ್ಬರೂ ಮಹಿಳೆಯರಾಗಿದ್ದಾರೆ ಎಂದು ಅಧಿಕಾರಿಯೋರ್ವರು ತಿಳಿಸಿದರು.

ಎನ್‌ಡಿಆರ್‌ಎಫ್ ತಂಡಗಳು ಕಳೆದ ರಾತ್ರಿ ಸ್ಥಗಿತಗೊಳಿಸಿದ್ದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಶುಕ್ರವಾರ ಬೆಳಿಗ್ಗೆ 6:30ರ ಸುಮಾರಿಗೆ ಸುರಿಯುತ್ತಿದ್ದ ಮಳೆಯ ನಡುವೆಯೇ ಆರಂಭಿಸಿದ್ದವು.

ಸ್ಥಳೀಯ ಗ್ರಾಮಸ್ಥರು ಮತ್ತು ಅವಶೇಷಗಳಡಿ ಸಿಕ್ಕಿಕೊಂಡಿರುವವರ ಸಂಬಂಧಿಗಳು ರಕ್ಷಣಾ ತಂಡಗಳಿಗೆ ನೆರವಾಗುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದರು.

ಮುಂಬೈನಿಂದ ಸುಮಾರು 80 ಕಿ.ಮೀ. ದೂರದಲ್ಲಿರುವ ಕರಾವಳಿ ಜಿಲ್ಲೆಯಲ್ಲಿ ಗುಡ್ಡದ ಇಳಿಜಾರಿನಲ್ಲಿರುವ ಬುಡಕಟ್ಟು ಗ್ರಾಮ ಇರ್ಷಲವಾಡಿಯಲ್ಲಿ ಬುಧವಾರ ರಾತ್ರಿ ಭಾರೀ ಭೂಕುಸಿತ ಸಂಭವಿಸಿತ್ತು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News