×
Ad

ಜಮ್ಮುಕಾಶ್ಮೀರ | ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನದಿಂದ ಮತ್ತೆ ಗುಂಡಿನ ದಾಳಿ : ಭಾರತದಿಂದ ಪ್ರತ್ಯುತ್ತರ

Update: 2025-04-30 10:05 IST
Photo |  indiatoday

ಶ್ರೀನಗರ: ಜಮ್ಮುಕಾಶ್ಮೀರದ ಪರ್ಗವಾಲ್ ವಲಯದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆ ಗುಂಡಿನ ದಾಳಿ ನಡೆಸಿದ್ದು, ಗಡಿ ನಿಯಂತ್ರಣ ರೇಖೆ ಬಳಿ ಸತತ ಆರನೇ ದಿನವೂ ಕದನ ವಿರಾಮ ಉಲ್ಲಂಘನೆ ಮುಂದುವರಿದಿದೆ.

ಎಪ್ರಿಲ್ 29 ಮತ್ತು 30ರ ಮಧ್ಯರಾತ್ರಿ, ನೌಶೇರಾ, ಸುಂದರ್ಬನಿ ಮತ್ತು ಅಖ್ನೂರ್ ವಲಯಗಳಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿ ನಡೆದಿದೆ. ಇದಕ್ಕೆ ಭಾರತೀಯ ಸೇನಾ ಪಡೆ ತಕ್ಕ ಪ್ರತಿಕ್ರಿಯೆ ನೀಡಿದೆ.

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ನಡೆಸುತ್ತಿದೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News