×
Ad

ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ: 6ನೇ ಆರೋಪಿಯ ಬಂಧನ

Update: 2023-07-23 21:51 IST

ಸಾಂದರ್ಭಿಕ ಚಿತ್ರ Photo: Twitter

ಇಂಫಾಲ : ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಮೇ 4ರಂದು ಮೂವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ 6ನೇ ಆರೋಪಿಯನ್ನು ಮಣಿಪುರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಗುಂಪೊಂದು ಇಬ್ಬರು ಕುಕಿ ಮಹಿಳೆಯರ ನಗ್ನ ಮೆರವಣಿಗೆ ನಡೆಸಿದ ವೀಡಿಯೊ ಜುಲೈ 19ರಂದು ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಆಗಿತ್ತು. ಮೈತೇಯಿ ಹಾಗೂ ಕುಕಿ ಸಮುದಾಯಗಳ ನಡುವೆ ಘರ್ಷಣೆ ಆರಂಭವಾದ ಒಂದು ದಿನದ ಬಳಿಕ ಮೇ 4ರಂದು ಕಾಂಗ್ಪೋಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ವೀಡಿಯೊದಲ್ಲಿ ಕಂಡು ಬಂದ ಇಬ್ಬರು ಸೇರಿದಂತೆ ಮೂವರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು.

ಓರ್ವ ಮಹಿಳೆಯನ್ನು ಬರ್ಬರವಾಗಿ ಸಾಮೂಹಿಕ ಅತ್ಯಾಚಾರ ಎಸಗಲಾಗಿತ್ತು ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ. ಮೇ 18ರಂದು ಈ ಘಟನೆ ಕುರಿತಂತೆ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ. 6 ಮಂದಿ ಆರೋಪಿಗಳಲ್ಲಿ ನಾಲ್ಕು ಮಂದಿಯನ್ನು ಬಂಧಿಸಿ 11 ದಿನಗಳು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News